ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ 25 ವರ್ಷ ಸಜೆ

1 Min Read
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ 25 ವರ್ಷ ಸಜೆ

ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿದ್ದವನಿಗೆ ನಗರದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಬಿ.ಪಿ.ದೇವಮಾನೆ 25 ವರ್ಷ ಸಜೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಜಗಂಪಲ್ಲಿ ಗ್ರಾಮದ ಶಿವಕುಮಾರ್ ಗೌನಿಪಲ್ಲಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿ, ಗರ್ಭಿಣಿ ಮಾಡಿ, ಮಗುವಿನ ಜನನಕ್ಕೆ ಕಾರಣನಾಗಿದ್ದಾನೆ ಎಂಬ ಆರೋಪದಡಿ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪಾಲಕರು ದೂರು ದಾಖಲಿಸಿದ್ದರು.
ವೃತ್ತ ನಿರೀಕ್ಷಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಶಿವಕುಮಾರ್‌ಗೆ 25 ವರ್ಷ ಸಜೆ ಹಾಗೂ ೫೦ ಸಾವಿರ ರೂ. ದಂಡ ವಿಽಸಿದ್ದಾರೆ. ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ 4,೦೦,೦೦೦ ರೂ. ಹಾಗೂ ಮಗುವಿಗೆ 3,೦೦,೦೦೦ ರೂ. ಸರ್ಕಾರದ ವತಿಯಿಂದ ಪರಿಹಾರ ಧನ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

See also  6 ರೇಪ್​ ಕೇಸ್​ ಸೇರಿ ಅನೇಕ ಅಪರಾಧಗಳು: ಸರ್ಕಲ್​ ಇನ್ಸ್​ಪೆಕ್ಟರ್​ ವಜಾ ಬೆನ್ನಲ್ಲೇ 58ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಿಗ್​ ಶಾಕ್​
Share This Article