More

    ಅಪ್ರಾಪ್ತೆ ಫುಸಲಾಯಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ನಾಲ್ವರಿಗೆ 25 ವರ್ಷ ಕಠಿಣ ಶಿಕ್ಷೆ

    ಶಿವಮೊಗ್ಗ: ಕರೊನಾ ಸೋಂಕಿತ ತಾಯಿಯ ಆರೈಕೆಯಲ್ಲಿದ್ದ ಅಪ್ರಾಪ್ತೆಯನ್ನು ಫುಸಲಾಯಿಸಿ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದ ನಾಲ್ವರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು ತಲಾ 25 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ.

    ಶಿವಮೊಗ್ಗದ ಮನೋಜ್, ಪ್ರಜ್ವಲ್, ವಿನಯ್ ಹಾಗೂ ಸಂದೀಪ್ ಶಿಕ್ಷೆಗೆ ಒಳಗಾದವರು. 2020ರ ಡಿ.6ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ಆರೈಕೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೊನಾ ಸೋಂಕಿನಿಂದ ಬಾಲಕಿಯ ತಾಯಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದಲ್ಲಿ ಗಲಭೆ ಹಿನ್ನಲೆ ಅಂದು ನಿಷೇಧಾಜ್ಞೆ ವಿಧಿಸಲಾಗಿತ್ತು. ಹೀಗಾಗಿ ಅಲ್ಲಿನ ಕ್ಯಾಂಟೀನ್ ಬಂದ್ ಆಗಿತ್ತು. ಊಟ, ಹಣ್ಣು, ಹಾಲು ಹತ್ತಿರದಲ್ಲಿ ಸಿಗುತ್ತಿರಲಿಲ್ಲ. ತಾಯಿಗೆ ಊಟ ತರಲು ಬಾಲಕಿ ಹೊರಗೆ ತೆರಳಿದ್ದಳು. ಆಸ್ಪತ್ರೆಯ ವಾರ್ಡ್‌ಬಾಯ್ ಆಗಿದ್ದ ಮನೋಜ್, ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಊಟ ಕೊಡಿಸುವುದಾಗಿ ಬಾಲಕಿಯನ್ನು ಒಮ್ನಿಯಲ್ಲಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಬಳಿಕ ವಾಪಸ್ ಆಸ್ಪತ್ರೆ ಬಳಿ ಕರೆತಂದು ಬಿಟ್ಟಿದ್ದರು. ಲ್ಲಿದ್ದವರು ಗಮನಿಸಿ ಆಸ್ಪತ್ರೆ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದರು. ನಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಘಟನೆ ಸಂಬಂಧ ನಾಲ್ವರನ್ನು ಬಂಧಿಸಿ ಮಹಿಳಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದೆ ನ್ಯಾಯಾಧೀಶ ಜಿ.ಎಸ್.ಮೋಹನ್ ಅವರು, ಆರೋಪ ಸಾಬೀತಾಗಿದ್ದರಿಂದ ನಾಲ್ವರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ಬಾಲಕಿ ಪರವಾಗಿ ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts