ವಿಜಯವಾಣಿ ಸುದ್ದಿಜಾಲ ಚಿಂಚೋಳಿ
ಚಿಂಚೋಳಿಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಕೆಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಂದಾಜು 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು, ಆಧಾರ್ ಸಂಬಂಧಿತ 250ಕ್ಕೂ ಹೆಚ್ಚು ಅರ್ಜಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಉಳಿದಂತೆ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗುತ್ತದೆ. 2-3 ದಿನದಲ್ಲಿ ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ, ಜೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.