20.4 C
Bangalore
Monday, December 9, 2019

2500 ಕ್ಕೂ ಹೆಚ್ಚು ಪುಸ್ತಕ ನೀರುಪಾಲು

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಮೆಣಸಗಿ: ಮಲಪ್ರಭೆ, ಬೆಣ್ಣೆಹಳ್ಳದ ಪ್ರವಾಹದಿಂದ ಅಕ್ಷರಶಃ ನೀರು ಪಾಲಾಗಿದ್ದ ಹಳ್ಳಿಗಳಲ್ಲಿ ಮೆಣಸಗಿ ಗ್ರಾಮವೂ ಒಂದು. ಗ್ರಾಮದಲ್ಲಿನ ಮನೆಗಳು, ಮಹತ್ವದ ದಾಖಲೆಗಳು, ಜಾನುವಾರುಗಳ ಹೊಟ್ಟು-ಮೇವು ನೀರು ಪಾಲಾಗಿದೆ. ಇಂಥದ್ದರಲ್ಲಿ ಗ್ರಾಮ ಪಂಚಾಯಿತಿಯ ಸಾರ್ವಜನಿಕ ಗ್ರಂಥಾಲಯ ಹಾಗೂ ಅದರಲ್ಲಿದ್ದ 2500ಕ್ಕೂ ಅಧಿಕ ಪುಸ್ತಕಗಳು ತೊಯ್ದು ತೊಪ್ಪೆಯಾಗಿವೆ. ಜ್ಞಾನ ದಾಹ ಇಂಗಿಸಬೇಕಿದ್ದ ಪುಸ್ತಕಗಳು ನೀರುಪಾಲಾಗಿದ್ದು, ಓದುಗರು, ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ತೀವ್ರ ತೊಂದರೆಯಾಗುತ್ತಿದೆ.

ಪ್ರವಾಹದಲ್ಲಿ ಗ್ರಾಮಕ್ಕೆ ಗ್ರಾಮವೇ ಜಲಾವೃತಗೊಂಡಿತ್ತು. ಗ್ರಾಮದ ಮಧ್ಯಭಾಗದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿನ 2500ಕ್ಕೂ ಹೆಚ್ಚು ಪುಸ್ತಕಗಳು, ಮೇಜು, ಕುರ್ಚಿ, ಗಡಿಯಾರ, ಬೆಲೆಬಾಳುವ ವಿಶ್ವಕೋಶಗಳು, ಹಾಜರಿ ಪುಸ್ತಕ ಹಾಗೂ ಪುಸ್ತಕಗಳ ಸಮಗ್ರ ಮಾಹಿತಿಯ ಪುಸ್ತಕ ಎಲ್ಲವೂ ತೋಯ್ದಿವೆ. ಅಲ್ಲದೆ, ವೃತ್ತಿಪತ್ರಿಕೆಗಳು, ನಿಯತಕಾಲಿಕೆಗಳು, ವಾರಪತ್ರಿಕೆಗಳು, ಮಾಸ ಪತ್ರಿಕೆಗಳು ನಿಯತಕಾಲಿಕೆಗಳು, ವಾರಪತ್ರಿಕೆಗಳು, ಮಾಸ ಪತ್ರಿಕೆಗಳು, ದಿನ ಪತ್ರಿಕೆಗಳು ಸಂಪೂರ್ಣವಾಗಿ ನೆನೆದಿದ್ದು, ಅವುಗಳನ್ನು ಮುಟ್ಟಿದರೆ ಹರಿದು ಹೋಗುವ ಸ್ಥಿತಿಯಲ್ಲಿವೆ.

ಈ ಕುರಿತು ಗ್ರಂಥಾಲಯ ಇಲಾಖೆಯವರು ಇತ್ತ ಗಮನ ಹರಿಸಿ ಸರ್ಕಾರದಿಂದ ಸಿಗತಕ್ಕ ಸೌಲಭ್ಯಗಳನ್ನು ಒದಗಿಸಿ ಗ್ರಂಥಾಲಯದಲ್ಲಿನ ಪುಸ್ತಕಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಗ್ರಂಥಾಲಯದಲ್ಲಿ ನೀರು ತುಂಬಿ ಬಹುತೇಕ ಪುಸ್ತಕಗಳು ನೆನೆದು ಹರಿಯುತ್ತಿವೆ. ಅಲ್ಪಸ್ವಲ್ಪ ಹಾನಿಯಾದ ಪುಸ್ತಕಗಳನ್ನು ಆರಿಸಿ ಬಿಸಿಲಿಗೆ ಒಣ ಹಾಕಲಾಗಿದೆ. ಅಲ್ಲದೆ, ಗ್ರಂಥಾಲಯದಲ್ಲಿನ ಪೀಠೋಪಕರಣಗಳು ಹಾಳಾಗಿದ್ದು, ಅವುಗಳ ಮೇಲೆ ಕುಳಿತು ಓದಲು ಬಾರದಂತಾಗಿ ತೊಂದರೆದಾಯಕವಾಗಿದೆ.
| ವಿನಾಯಕ ಮಣ್ಣೂರ, ಗ್ರಾಮಸ್ಥ

ಪ್ರವಾಹದಿಂದಾಗಿ ಗ್ರಂಥಾಲಯದಲ್ಲಿ ನೀರು ಹೊಕ್ಕು ಪುಸ್ತಕಗಳು ಹಾಳಾಗಿವೆ. ಹಾಜರಿ ಪುಸ್ತಕ, ಪುಸ್ತಕಗಳ ಮಾಹಿತಿ ಬುಕ್ ಎಲ್ಲವೂ ನೀರಲ್ಲಿ ನೆನೆದಿವೆ. ಮೇಜು, ಕುರ್ಚಿ ಹಾಗೂ ನೆಲವೆಲ್ಲ ಕೆಸರುಮಯವಾಗಿದೆ. ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆದಿದ್ದರೂ ಸಾರ್ವಜನಿಕರಿಗೆ ಸೇವೆ ನೀಡಲು ಸಾಧ್ಯವಾಗಿಲ್ಲ. ನನ್ನ ಆರೋಗ್ಯವೂ ಸರಿಯಾಗಿಲ್ಲ. ಆದರೂ ಓದುಗರ ಒತ್ತಾಸೆಯಂತೆ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದೇವೆ. ಇಂಥ ಸಂದರ್ಭದಲ್ಲಿ ನಮ್ಮ ಇಲಾಖೆಯಿಂದ ಸಹಾಯ, ಸಹಕಾರ ಅತ್ಯಗತ್ಯವಾಗಿದೆ.
|ಲಕ್ಷ್ಮಣ ಆರ್. ನಾಯ್ಕರ, ಗ್ರಂಥಪಾಲಕ, ಸಾರ್ವಜನಿಕ ಗ್ರಾಮೀಣ ಗ್ರಂಥಾಲಯ, ಮೆಣಸಗಿ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...