More

    ತಡಸದಲ್ಲಿ 2500 ನಲ್ಲಿ ಸಂಪರ್ಕ

    ಶಿಗ್ಗಾಂವಿ(ಗ್ರಾ): ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ ಮಿಷನ್ ಅಡಿ ತಾಲೂಕಿನ ತಡಸ ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಸುಮಾರು 2500 ಮನೆಗಳಿಗೆ ನಳದ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ತಾಲೂಕಿನ ತಡಸ ಗಾಮದಲ್ಲಿ ಭಾನುವಾರ ಗಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 2022-23ನೇ ಸಾಲಿನ ಜಲ ಜೀವನ ಮಿಷನ್ ಅಡಿ ಮನೆ ಮನೆಗೆ ಗಂಗೆ ಯೋಜನೆಗೆ ಭೂಮಿಪೂಜೆ, ಪ್ರವಾಸಿ ಮಂದಿರದ ನೂತನ ಕಟ್ಟಡ ಉದ್ಘಾಟನೆ, ದುಂಡಸಿ ಗ್ರಾಮದಲ್ಲಿ ಶಾಂತಿನಾಥ ತ್ಯಾಗಿ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಡಿಸೆಂಬರ್ ಅಂತ್ಯದೊಳಗೆ ಶಿಗ್ಗಾಂವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ನಲ್ಲಿ ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ದುಂಡಸಿ ಗ್ರಾಮದಲ್ಲಿ 1.80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಗೆ ವೈದ್ಯರು, ಶುಶ್ರೂಕಿಯರು ಜತೆಗೆ ಮೂಲಸೌಲಭ್ಯ ಕಲ್ಪಿಸಲಾಗುವುದು. ದುಂಡಸಿಯಲ್ಲಿ ಅರಟಾಳ ರುದ್ರಗೌಡರ ಹೆಸರಿನಲ್ಲಿ ಹೆಣ್ಣು ಮಕ್ಕಳ ಪ್ರೌಢಶಾಲೆ ಸ್ಥಾಪನೆ ಮತ್ತು ಮುಂದಿನ ವರ್ಷ ಪಿಯು ಕಾಲೇಜ ಪ್ರಾರಂಭಿಸಲಾಗುವುದು ಎಂದರು.

    ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ರಾಜ್ಯದಲ್ಲಿ 75 ವರ್ಷದಲ್ಲಿ ಕೇವಲ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಕೀರ್ತಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ ಎಂದರು.

    ತಡಸ ಗ್ರಾಪಂ ಅಧ್ಯಕ್ಷೆ ರಜಿಯಾ ಅರಳಿಕಟ್ಟಿ, ದುಂಡಸಿ ಗ್ರಾಪಂ ಅಧ್ಯಕ್ಷೆ ಖತೀಜಾಬಿ ಜಮಾದಾರ, ಶ್ರೀಕಾಂತ ದುಂಡಿಗೌಡ್ರ, ತಿಪ್ಪಣ್ಣ ಸಾತಣ್ಣವರ, ರಾಜಣ್ಣ ಗಂಜಿಗಟ್ಟಿ, ಶಿವಾನಂದ ಮ್ಯಾಗೇರಿ, ನರಹರಿ ಕಟ್ಟಿ, ವಿದ್ಯಾಶ್ರೀ ಅಕ್ಕಿ, ಬಸವಯ್ಯ ಹಿರೇಮಠ, ಈರಣ್ಣ ಮಹಾಜನಶೇಟ್ಟರ, ಸಂತೋಷ ಹುಣಸ್ಯಾಳ, ರೇಣುಕಾ ಮುಳಗುಂದ, ಬಾಹುಬಲಿ ಅಕ್ಕಿ, ಈರಣ್ಣ ಸಮಗೊಂಡ, ಪ್ರಭು ನಂಜಪ್ಪನವರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts