ಶೃಂಗೇರಿ: ಸಮಾಜದಲ್ಲಿ ಸರ್ವರೂ ಸಮಾನತೆಯಿಂದ ಜೀವನ ನಡೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಸಹಬಾಳ್ವೆಯಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಸರ್ವರೂ ತಮ್ಮ ಹಕ್ಕುಗಳ ಕುರಿತು ಜ್ಞಾನ ಪಡೆದುಕೊಳ್ಳಬೇಕು ಎಂದು ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ರಾಜ್ಯಾಧ್ಯಕ್ಷ ನಾರಾಯಣ.ಜಿ.ಈಳಿಗೇರ ಹೇಳಿದರು.
ಪಟ್ಟಣದಲ್ಲಿ ತಾಲೂಕು ಐಎಚ್‌ಆರ್‌ಒ ಸಂಸ್ಥೆ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾನೂನಿನ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ. ಕಾನೂನಿನ ಅರಿವು ಹಾಗೂ ತಮ್ಮ ಹಕ್ಕುಗಳ ಕುರಿತು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಸಂಘ, ಸಂಸ್ಥೆಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು. ಸಮಾಜದ ಕಟ್ಟಕಡೆ ಜನರಿಗೆ ತೊಂದರೆಯಾದಾಗ ಅವರಿಗೆ ನೆರವು ನೀಡಬೇಕು. ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ಅದನ್ನು ಖಂಡಿಸುವ ಮನೋಭಾವ ನಮ್ಮಲ್ಲಿರಬೇಕು ಎಂದರು.
ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಜೆ.ಗಿರಿಧರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣ್, ತಾಲೂಕು ಐಎಚ್‌ಆರ್‌ಒ ಅಧ್ಯಕ್ಷ ಜಿ.ವಿ.ಮೋಹನ್, ಪದಾಧಿಕಾರಿಗಳಾದ ಎಸ್.ಪಿ.ನವೀನ್ ಕುಮಾರ್,ಬಾಲಗಂಗಾಧರ್, ಸಚಿನ್,ಗೋವಿಂದ, ಗಣೇಶ್ ಇದ್ದರು.
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…