More

    ಶಿವಮೊಗ್ಗ ಜಿಲ್ಲೆಯಲ್ಲಿ 252 ಶತಾಯುಷಿ ಮತದಾರರು

    ಶಿವಮೊಗ್ಗ: ಲೋಕಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಅಂತಿಮಗೊಂಡಿದ್ದು. ಇದುವರೆಗೆ 7,31,779 ಪುರುಷರು, 7,51,159 ಮಹಿಳೆಯರು ಸೇರಿದಂತೆ ಒಟ್ಟು 14,83,938 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 252 ಮಂದಿ ಶತಾಯುಷಿಗಳಿದ್ದಾರೆ.

    ಸೋಮವಾರ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಡಾ. ಆರ್.ಸೆಲ್ವಮಣಿ ಈ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ 1,793 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಕಳೆದ ಚುನಾವಣೆಗೆ ಹೋಲಿಸಿದರೆ 19 ಮತಗಟ್ಟೆಗಳನ್ನು ಹೊಸದಾಗಿ ತೆರೆಯಲಾಗುತ್ತಿದೆ. ಕಳೆದ ವರ್ಷ ನಡೆದ ವಿಧಾಸಭೆ ಚುನಾವಣೆಗೆ ಹೋಲಿಸಿದರೆ 20,500 ಮಹಿಳಾ ಮತದಾರರು ಹೆಚ್ಚುವರಿಯಾಗಿದ್ದಾರೆ ಎಂದರು.
    80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲ ಮತದಾರರು ನಿಗದಿತ ಮಾದರಿಯಲ್ಲಿ ಕೋರಿಕೆ ಸಲ್ಲಿಸಿದರೆ ಅವರ ಮನೆಗಳಿಗೆ ಅಧಿಕಾರಿಗಳು ತೆರಳಿ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 500ಕ್ಕೂ ಹೆಚ್ಚು ಮತದಾರರು ಈ ಸೌಲಭ್ಯ ಪಡೆದುಕೊಂಡಿದ್ದರು ಎಂದು ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ತಾಲೂಕು ಚುನಾವಣಾ ತಹಸೀಲ್ದಾರ್ ಮಂಜುನಾಥ್, ಜೆಡಿಎಸ್ ಮುಖಂಡ ತ್ಯಾಗರಾಜ್, ಕಾಂಗ್ರೆಸ್ ಮುಖಂಡ ಚಂದನ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts