ವಿಶ್ವಸಂಸ್ಥೆ: 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹಫೀಜ್ ಸಯೀದ್ ಪಾಕಿಸ್ತಾನ ವಶದಲ್ಲಿದ್ದು, ಶಿಕ್ಷೆ ಅನುಭವಿಸುತ್ತಿದ್ದಾನೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: ಗುಜರಾತ್ ಶೃಂಗಸಭೆಗೂ ಮುನ್ನ ಅಹಮದಾಬಾದ್‌ನಲ್ಲಿ ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ರೋಡ್ ವೆವೆ
2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ನಿರ್ಬಂಧಕ್ಕೊಳಗಾಗಿರುವ ಜಾಗತಿಕ ಭಯೋತ್ಪಾದಕ ಸಯೀದ್ ಹಲವು ಪ್ರಕರಣಗಳಲ್ಲಿ 78 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಏಳು ಭಯೋತ್ಪಾದಕ, ಹಣಕಾಸು ಪ್ರಕರಣಗಳಲ್ಲಿ ಸಯೀದ್ ಫೆಬ್ರವರಿ 12, 2020 ರಿಂದ ತನ್ನ ಶಿಕ್ಷೆ ಅನುಭವಿಸುತ್ತಿದ್ದಾನೆ ಎಂದು ಮಾಹಿತಿ ನೀಡಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಲೆವೆಂಟ್ ಮತ್ತು ಅಲ್-ಖೈದಾ ಮೇಲಿನ ನಿರ್ಬಂಧಗಳಾದ ಸ್ವತ್ತುಗಳು ಜಪ್ತಿ, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಒಳಪಟ್ಟಿರುವ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಯಮಗಳಿಗೆ ಕೆಲವು ತಿದ್ದುಪಡಿಗಳನ್ನು ಮಾಡಿದೆ.
2008 ರ ಮುಂಬೈ ಭಯೋತ್ಪಾದಕ ದಾಳಿಗೆ ಎಲ್ಇಟಿ ದಾಳಿಕೋರರಿಗೆ ತರಬೇತಿ ನೀಡಿದ್ದ ಮತ್ತು ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸಿದ್ದ ಭುಟ್ಟವಿ, ಶಿಕ್ಷೆಯನ್ನು ಅನುಭವಿಸುತ್ತಿರುವಾಗ ಕಳೆದ ವರ್ಷ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಜೈಲಿನಲ್ಲಿ ನಿಧನ ಹೊಂದಿದ್ದಾನೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು ಹಸ್ತಾಂತರ ಮಾಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಭಾರತ ಸರ್ಕಾರ ಮನವಿ ಮಾಡಿದೆ. ಹಫೀಜ್ ಸಯೀದ್‌ನನ್ನು ಭಾರತಕ್ಕೆ ಕರೆ ತಂದು ಈ ನೆಲದ ಕಾನೂನಿನ ಅನ್ವಯ ಆತನಿಗೆ ಶಿಕ್ಷೆ ವಿಧಿಸಲು ಭಾರತ ಸರ್ಕಾರ ಬಯಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ಹಫೀಜ್ ಸಯೀದ್ ಹಸ್ತಾಂತರ ಮಾಡುವಂತೆ ಭಾರತ ಮನವಿ ಸಲ್ಲಿಸಿದೆ ಎನ್ನಲಾಗಿದೆ.
ಹಫೀಜ್ ಸಯೀದ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದು, ಈತನ ತಲೆಗೆ ಭಾರತ 10 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಘೋಷಿಸಿದೆ. 2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಹಫೀಜ್ ಸಯೀದ್ ಮಾಸ್ಟರ್ ಮೈಂಡ್ ಎಂದು ತನಿಖೆ ವೇಳೆ ತಿಳಿದು ಬಂದಿತ್ತು.
ಮೋದಿ ಸಂಪುಟಕ್ಕೆ ಕುಮಾರಸ್ವಾಮಿ ಜತೆ ಇನ್ನೂ ಮೂವರು ಸಿಎಂಗಳು: ಚುನಾವಣೆಗೆ ಮುನ್ನ ಬಿಜೆಪಿಯ ಬಿಗ್ ಸ್ಟ್ರಾಟಜಿ..!