25.1 C
Bangalore
Friday, December 6, 2019

ಅಭಿವೃದ್ಧಿಗೆ 26.50 ಕೋಟಿ ರೂ.

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ

ರಟ್ಟಿಹಳ್ಳಿ, ಹಿರೇಕೆರೂರ ತಾಲೂಕಿನ ರಸ್ತೆ ಮತ್ತು ಕೆರೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 26.50 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದು ಮಾಜಿ ಶಾಸಕ ಬಿ.ಸಿ. ಪಾಟೀಲ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆಗೆ (ಎಸ್​ಎಫ್​ಸಿ) ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿತ್ತು. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಸ್ತೆ, ಕೆರೆ ಅಭಿವೃದ್ಧಿಗಾಗಿ ಒಟ್ಟು 26.50 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದರು.

2019-20ನೇ ಸಾಲಿನ 3054 ಲಮ್ ಸಮ್ (ವಿಶೇಷ ಅನುದಾನ) ಯೋಜನೆಯಡಿ 8.25 ಕೋಟಿ ರೂ. ಮಂಜೂರಾಗಿದೆ. ರಟ್ಟಿಹಳ್ಳಿ ತಾಲೂಕಿನ ಮೇದೂರು, ಕಣವಿಸಿದ್ದಗೇರಿ ರಸ್ತೆ ಅಭಿವೃದ್ಧಿಗೆ 1.50 ಕೋಟಿ ರೂ., ತಾಲೂಕಿನ ಚನ್ನಳ್ಳಿಯಿಂದ ದೂದಿಹಳ್ಳಿ ರಸ್ತೆಗೆ 70 ಲಕ್ಷ ರೂ., ದೊಡ್ಡಗುಬ್ಬಿ- ಯಡಗೋಡ ರಸ್ತೆ ಅಭಿವೃದ್ಧಿಗೆ 55 ಲಕ್ಷ ರೂ., ಬುಳ್ಳಾಪುರ- ಕಿರಗೇರಿ

ರಸ್ತೆಗೆ 75 ಲಕ್ಷ ರೂ., ಚಿಕ್ಕೇರೂರು- ಯಲ್ಲಾಪುರ ರಸ್ತೆಗೆ 75 ಲಕ್ಷ ರೂ., ಕಡೂರು- ಕಣವಿಸಿದ್ದಗೇರಿ ರಸ್ತೆಗೆ 28 ಲಕ್ಷ ರೂ., ಕೂಲಿ- ಕುಡಪಲಿ ರಸ್ತೆಗೆ 25 ಲಕ್ಷ ರೂ., ಹಿರೇಮತ್ತೂರಿನಿಂದ- ಗಂಗಾಪುರ ರಸ್ತೆಗೆ 66 ಲಕ್ಷ ರೂ., ಹಿರೇಕೆರೂರು- ಹಂಸಭಾವಿ ರಸ್ತೆಯಿಂದ ಆರಿಕಟ್ಟಿ ರಸ್ತೆಗೆ 46 ಲಕ್ಷ ರೂ., ಹಳೇನಿಡನೇಗಿಲು, ಹೊಸನಿಡನೇಗಿಲು ರಸ್ತೆಗೆ 26 ಲಕ್ಷ ರೂ., ಹಿರೇಕೆರೂರು, ಹಂಸಭಾವಿ ರಸ್ತೆಯಿಂದ ಬೆಟಕೇರೂರು ರಸ್ತೆಗೆ 1 ಕೋಟಿ ರೂ., ಹಿರೇಕೆರೂರು, ಕೋಡ ರಸ್ತೆಯಿಂದ ನೂಲಗೇರಿ ಗ್ರಾಮಕ್ಕೆ ಹೋಗುವ ರಸ್ತೆಗೆ 109 ಕೋಟಿ ರೂ. ಮಂಜೂರಾಗಿದೆ.

ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ ಪಡಿಸಲು ಒಟ್ಟು 16.25 ಕೋಟಿ ರೂ. ಮಂಜೂರಾಗಿದೆ. ಅದರಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 57ರಿಂದ 76ರವರೆಗಿನ ಮಾವಿನತೋಪ, ನೇಶ್ವಿ, ಬತ್ತಿಕೊಪ್ಪ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿಗಾಗಿ 2 ಕೋಟಿ ರೂ., ತಾಲೂಕಿನ ಅಣಜಿಯಿಂದ ರಾಷ್ಟ್ರೀಯ ಹೆದ್ದಾರಿ 26ರ ಕಮಲಾಪುರ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿಗೆ 3 ಕೋಟಿ ರೂ., ವರಹ, ನಿಡನೇಗಿಲು, ತಿಪ್ಪಾಯಿಕೊಪ್ಪ ರಸ್ತೆಗೆ 3 ಕೋಟಿ ರೂ., ಕೋಡ, ಅಬಲೂರು ರಸ್ತೆಗೆ 2 ಕೋಟಿ ರೂ., ಹಿರೇಕೊಣತಿ, ಮಡ್ಲೂರು ರಸ್ತೆಗೆ 1.25 ಕೋಟಿ ರೂ., ಹೊಸಕಟ್ಟಿ, ಹೊನ್ನಾಳಿ ರಸ್ತೆಗೆ 3.50 ಕೋಟಿ ರೂ., ದೂದಿಹಳ್ಳಿ, ರಟ್ಟಿಹಳ್ಳಿ ರಸ್ತೆಗೆ 1.50 ಕೋಟಿ ರೂ. ಮಂಜೂರಾಗಿದೆ. ಪಟ್ಟಣದಲ್ಲಿ ವಾರ್ಡ್ ನಂ. 20ರ ಸರ್ವೆ ನಂ 231ರಲ್ಲಿನ 4.22 ಎಕರೆ ವಿಸ್ತೀರ್ಣದ ಪುರಾತನ ತಿಪ್ಪನ ಶೆಟ್ಟಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು, ಕೆರೆ ಸಂರಕ್ಷಿಸಲು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 2 ಕೋಟಿ ರೂ. ಮಂಜೂರಾಗಿದೆ. ಶೀಘ್ರದಲ್ಲಿ ಟೆಂಡರ್ ಪ್ರಕಿಯೆ ಮುಗಿದು ಕೆಲಸ ಪ್ರಾರಂಭವಾಗಲಿವೆ ಎಂದು ಮಾಹಿತಿ ನೀಡಿದರು.

ತಾ.ಪಂ. ಸದಸ್ಯ ಬಸವರಾಜ ಭರಮಗೌಡ್ರ, ಗ್ರಾ.ಪಂ. ಅಧ್ಯಕ್ಷ ರಾಜು ಹುಚ್ಚಗೊಂಡರ, ಪ.ಪಂ. ಸದಸ್ಯರಾದ ಗುರುಶಾಂತ ಯತ್ತಿನಹಳ್ಳಿ, ಅಶೋಕ ಜಾಡಬಂದಿ, ಅಲ್ತಾಫಖಾನ್ ಪಠಾಣ, ಬಸವರಾಜ ಕಟ್ಟಿಮನಿ, ಹನುಮಂತಪ್ಪ ಕುರಬರ, ಮುಖಂಡರಾದ ಡಿ.ಸಿ. ಪಾಟೀಲ, ಆರ್.ಎನ್. ಗಂಗೋಳ, ಪ್ರಕಾಶಗೌಡ ಗೌಡರ್, ಅಬ್ದುಲಖಾದರ್ ಲೋಹಾರ, ನವಿನ್ ಮುತ್ತಗಿ, ಪೀರಹ್ಮದ್ ಬೇವಿನಹಳ್ಳಿ, ರಮೇಶ ಹಡಗದ, ಬಸವರಾಜ ಕಾಲ್ವಿಹಳ್ಳಿ, ಮಂಜುನಾಥ ತಂಬಾಕದ, ಶಂಭು ಹಂಸಭಾವಿ, ಕೆ.ಜೆ. ಪ್ರತಾಪ, ಇತರರು ಇದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...