More

    ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; ಗಾಯಗೊಂಡ 26 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

    ಉತ್ತರಕನ್ನಡ: ವಿದ್ಯಾರ್ಥಿಗಳನ್ನು ಶಾಲಾ ಕಾಲೇಜುಗಳಿಂದ ಪ್ರವಾಸಕ್ಕೆ ಕರೆದುಕೊಂಡು ಹೋಗುವಾಗ ಆಡಳಿತ ಮಂಡಳಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಾಗುತ್ತದೆ. ಪ್ರವಾಸಕ್ಕೆ ಕರೆದುಯ್ಯುವ ವಿಚಾರವಾಗಿ ಶಿಕ್ಷಣ ಇಲಾಖೆ ಹಲವು ಮಾನದಂಡಗಳನ್ನು ಸಹಿತ ನೀಡಿದೆ. ಹೀಗಿದ್ದಾಗ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಕರೆತರುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ.

    ಪ್ರವಾಸದ ವೇಳೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬಸ್ಸಿನಲ್ಲಿ ಕರೆದುಕೊಂಡು ಹೋಗಬೇಕು. ಆದರೆ ಈ ಕಾಲೇಜಿನಿಂದ ಮಾತ್ರ ಪ್ರವಾಸಕ್ಕಾಗಿ ಟ್ರ್ಯಾಕ್ಟರ್ ಬಳಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್​​ನಲ್ಲಿ ಕರೆದುಕೊಂಡು ಹೋಗಿ ಬೇಜವಾಬ್ದಾರಿ ಮೆರೆದಿದ್ದಾರೆ. ಪರಿಣಾಮ ದಾರಿ ಮಧ್ಯೆ ಟ್ರ್ಯಾಕ್ಟರ್ ಅಪಘಾತವಾಗಿ ವಿದ್ಯಾರ್ಥಿನಿಯರು ಆಸ್ಪತ್ರೆ ಸೇರುವಂತಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಈ ಘಟನೆ ನಡೆದಿದೆ. ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಮಳಗಿಯಿಂದ ಕೊಳಗಿ ಎಂಬಲ್ಲಿಗೆ ಪ್ರವಾಸ ಕರೆದುಕೊಂಡು ಹೋಗಲಾಗಿತ್ತು. ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್​​ನಲ್ಲಿ ತುಂಬಿಸಿಕೊಂಡು ಪ್ರವಾಸ ಹೋಗಿದ್ದಾರೆ. ಈ ವೇಳೆ ದಾರಿಮಧ್ಯೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

    40 ವಿದ್ಯಾರ್ಥಿಗಳನ್ನು ಒಂದೇ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಪ್ರವಾಸಕ್ಕೆ ಹೋಗಿದ್ದಾರೆ. ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 26 ಜನ ವಿದ್ಯಾರ್ಥಿನಿಯರಿಗೆ ಗಾಯವಾಗಿದ್ದು, 8 ಜನ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts