More

    ಚೆನ್ನೈ: ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ ನಂತರ ಸಾವಿಗೀಡಾದ 26 ವರ್ಷದ ಯುವಕ!

    ತಮಿಳುನಾಡು: ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ 15 ನಿಮಿಷದಲ್ಲಿ ಯುವಕ ಸಾವನ್ನಪ್ಪಿದ್ದಾನೆ.

    ಇದನ್ನೂ ಓದಿ: ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಎನ್​ಐಎ ತನಿಖೆಗೆ ಕೋರ್ಟ್​ ಆದೇಶ

    ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಯುವಕನ ಸಾವಿನ ತನಿಖೆಗೆ ಇಬ್ಬರು ಜಂಟಿ ನಿರ್ದೇಶಕರನ್ನೊಳಗೊಂಡ ಸಮಿತಿ ರಚಿಸುವಂತೆ ವೈದ್ಯಕೀಯ ಇಲಾಖೆ ಆದೇಶಿಸಿದೆ.

    ಪುದುಚೇರಿ ಮೂಲದ 26 ವರ್ಷದ ಹೇಮಚಂದ್ರನ್ ತಮಿಳುನಾಡು ರಾಜಧಾನಿ ಚೆನ್ನೈನ ಪಮ್ಮಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತೂಕ ಇಳಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

    26 ವರ್ಷದ ಯುವಕನ ಮರಣಕ್ಕೆ ಸಂತಾಪ ಸೂಚಿಸಿರುವ ಸಚಿವ ಸುಬ್ರಮಣಿಯನ್​ ಅವರು ಹೇಮಚಂದ್ರನ್​ ನಿಧನದ ಬಗ್ಗೆ ಕೇಳಿ ದುಃಖವಾಗುತ್ತಿದೆ ಎಂದು ಪೋಷಕರಿಗೆ ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

    ಹೇಮಚಂದ್ರನ್​ ಸಾವಿನ ಬಗ್ಗೆ ಹಲವು ಅನುಮಾನಗಳಿವೆ ಎಂದು ಶಂಕರನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಹಾಗೂ ಶಸ್ತ್ರ ಚಿಕಿತ್ಸೆ ನಡೆದಿರುವ ಪಮ್ಮಲ್‌ನ ಸಂಬಂಧಪಟ್ಟ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts