27ರಿಂದ ಮಂಡ್ಯದಲ್ಲಿ ಸಂಕ್ರಾಂತಿ ಸಂಭ್ರಮ

ಮಂಡ್ಯ: ಸಾಂಸ್ಕೃತಿಕ ಸಂಘಟನೆಗಳ ಒಕ್ಕೂಟದಿಂದ ಜ.27ರಿಂದ ಫೆ.2ರವರೆಗೆ ನಗರದ ಕರ್ನಾಟಕ ಸಂಘದ ಆವರಣದ ಕುವೆಂಪು ಬಯಲು ರಂಗಮಂದಿರದಲ್ಲಿ `6ನೇ ವರ್ಷ ಸಂಕ್ರಾಂತಿ ಸಂಭ್ರಮ-2018′ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರದಾನ ಕಾರ್ಯದರ್ಶಿ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದರು.

ಪ್ರತಿವರ್ಷದಂತೆ ಈ ಬಾರಿಯೂ ವಿಶೇಷವಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಸ್ಥಳೀಯ ಮತ್ತು ಬೇರೆ ಜಿಲ್ಲೆಗಳ ಕಲಾವಿದರು ಜನರಿಗೆ ಮನರಂಜನೆ ನೀಡಲಿದ್ದಾರೆಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ.27ರಂದು ಸಂಜೆ 6.30ಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಸ್ವಾಮೀಜಿ ಸಾನಿಧ್ಯದಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಜಿಪಂ ಸಿಇಒ ಕೆ.ಯಾಲಕ್ಕಿಗೌಡ, ಕರ್ನಾಟಕ ಜಾನಪದ ಪರಿಷತ್ನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಭಾಗವಹಿಸಲಿದ್ದಾರೆ ಎಂದರು.

ಫೆ.1ರವರೆಗೆ ಪ್ರತಿದಿನ ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 2ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭದಲ್ಲಿ ಗಮಕಿ ಎಂ.ಆರ್.ಸತ್ಯನಾರಾಯಣ ಅವರಿಗೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ನಾಟ್ಯವಿದುಷಿ ಡಾ.ಚೇತನಾರಾಧಾಕೃಷ್ಣ ಅವರಿಗೆ ಕೆ.ವಿ.ಶಂಕರಗೌಡ ಪ್ರಶಸ್ತಿ ನೀಡಲಾಗುವುದು.

ಒಕ್ಕೂಟದ ಸಂಘಟಕ ಸೋಮಶೇಖರ್, ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು ಇದ್ದರು.


Leave a Reply

Your email address will not be published. Required fields are marked *