16 C
Bangalore
Thursday, December 12, 2019

ಮೋದಿಗೆ ಬಂದ ಉಡುಗೊರೆ ಖರೀದಿಸಲು ಅವಕಾಶ: ಆನ್​ಲೈನ್ ಮೂಲಕ ಪ್ರಕ್ರಿಯೆ ಆರಂಭ, 200ರಿಂದ 2.5 ಲಕ್ಷ ರೂ.ವರೆಗೆ ಬೆಲೆ ನಿಗದಿ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ ಸಿಕ್ಕಿರುವ ಉಡುಗೊರೆಗಳ ಆನ್​ಲೈನ್ ಹರಾಜಿಗೆ ಶನಿವಾರ ಚಾಲನೆ ನೀಡಲಾಗಿದೆ. ಈ ಬಗ್ಗೆ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇದರಲ್ಲಿ ಸಂಗ್ರಹವಾಗುವ ಹಣವನ್ನು ನಮಾಮಿ ಗಂಗೆ ಯೋಜನೆಗೆ ಬಳಸಿಕೊಳ್ಳುವುದಾಗಿ ಹೇಳಿದ್ದಾರೆ. ಈ ಉಡುಗೊರೆಗಳನ್ನು ದೆಹಲಿಯ ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯ ಮತ್ತು ಜೈಪುರ ಹೌಸ್​ನಲ್ಲಿ ಸೆ.14ರಿಂದ ಅ.3ರವರೆಗೆ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಪ್ರದರ್ಶನಕ್ಕಿಡಲಾಗಿದೆ.

ಒಟ್ಟು 2772 ವಸ್ತುಗಳನ್ನು ಹರಾಜಿಗೆ ಇಡಲಾಗಿದ್ದು, ಡಿಡಿಡಿ.ಟಞಞಛಿಞಛ್ಞಿಠಿಟಠ.ಜಟಡ.ಜ್ಞಿ ವೆಬ್​ಸೈಟ್​ನಲ್ಲಿ ಜನರು ಈ ವಸ್ತುಗಳಿಗೆ ಬಿಡ್ ಸಲ್ಲಿಸಬಹುದು. -ಠಿ; 200 ರಿಂದ 2.5 ಲಕ್ಷ ರೂ.ವರೆಗೆ ಹರಾಜಿನ ಮೊತ್ತವನ್ನು ನಿಗದಿಪಡಿಸಲಾಗಿದೆ.

ಯಾವ್ಯಾವ ವಸ್ತುಗಳಿವೆ?: ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯದಲ್ಲಿ ಸದ್ಯ 500 ಉಡುಗೊರೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ಗಣೇಶನ ವಿಗ್ರಹ, ಹನುಮಾನ್ ಮೂರ್ತಿ, ಅಂಬೇಡ್ಕರ್, ವೀರ ಶಿವಾಜಿ, ವಿವೇಕಾನಂದ ಮುಂತಾದವರ ಮೂರ್ತಿಗಳು ಸೇರಿವೆ. ಕಲಾತ್ಮಕ ಚಿತ್ರಗಳು, ಮೂರ್ತಿ, ಶಾಲುಗಳು, ಮುಂಡಾಸು, ಜಾಕೆಟ್, ಪಾರಂಪರಿಕ ಸಂಗೀತ ವಾದ್ಯಯಂತ್ರಗಳೂ ಇವೆ.

576 ಶಾಲುಗಳು, 88 ಮುಂಡಾಸು ಮತ್ತಿತರ ವಸ್ತುಗಳೂ ಇವೆ. ರೇಷ್ಮೆಯಲ್ಲಿ ಮಾಡಿರುವ ಮೋದಿಯ ಚಿತ್ರವಿರುವ ಶಾಲು ಅತಿ ದುಬಾರಿಯದ್ದಾಗಿದ್ದು, ಇದಕ್ಕೆ 2.5 ಲಕ್ಷ ಮೂಲಬೆಲೆ ನಿಗದಿಪಡಿಸಲಾಗಿದೆ. ಪ್ರತಿ ವಾರ ವಸ್ತುಗಳನ್ನು ಬದಲಾವಣೆ ಮಾಡಲಾಗುತ್ತದೆ.

ಇದೇ ಮೊದಲಲ್ಲ

ಪ್ರಧಾನಿ ಮೋದಿ ಉಡುಗೊರೆಗಳನ್ನು ಹರಾಜು ಹಾಕುತ್ತಿರುವುದು ಹೊಸದೇನಲ್ಲ. ಅವರು ಗುಜರಾತ್​ನ ಮುಖ್ಯಮಂತ್ರಿಯಾಗಿದ್ದಾನಿಂದಲೇ ಉಡುಗೊರೆಗಳ ಹರಾಜನ್ನು ಆರಂಭಿಸಿದ್ದರು. ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈ ಅಭ್ಯಾಸವನ್ನು ಮುಂದುವರಿಸಿದ್ದಾರೆ.

ಜನವರಿಯಲ್ಲಿ ನಡೆದಿತ್ತು

ಕಳೆದ ಜನವರಿಯಲ್ಲೂ ಮೋದಿಗೆ ಸಿಕ್ಕ ಉಡುಗೊರೆಗಳ ಹರಾಜು ಪ್ರಕ್ರಿಯೆ ನಡೆದಿತ್ತು. 15 ದಿನಗಳ ಕಾಲ ನಡೆದ ಈ ಪ್ರಕ್ರಿಯೆಯಲ್ಲಿ ಒಟ್ಟು 1800 ವಸ್ತುಗಳನ್ನು ಹರಾಜಿಗಿಡಲಾಗಿತ್ತು. 4000 ಜನರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ಸಿಕ್ಕ ಹಣವನ್ನು ಗಂಗಾನದಿ ಸ್ವಚ್ಛತಾ ಯೋಜನೆ ನಮಾಮಿ ಗಂಗೆಗೆ ಬಳಸಿಕೊಳ್ಳಲಾಗಿತ್ತು. ಈಗ ನಡೆಯುತ್ತಿರುವ ಹರಾಜಿನಿಂದ ಬಂದ ಹಣವೂ ಅದೇ ಯೋಜನೆಗೆ ಬಳಕೆಯಾಗಲಿದೆ. ಕಳೆದ ಬಾರಿ ನಡೆದ ಹರಾಜಿನಲ್ಲಿ ಬಿಎಂಡಬ್ಲ್ಯುನ ಮಾದರಿ ಅತಿ ಹೆಚ್ಚಿನ ಬೆಲೆಗೆ ಹರಾಜಾಗಿತ್ತು. ಇದು 5 ಲಕ್ಷ ರೂ. ಗಳಿಗೆ ಮಾರಾಟವಾಗಿತ್ತು. ಆದರೆ ಈ ಹರಾಜಿನಿಂದ ಸಿಕ್ಕ ಒಟ್ಟು ಮೊತ್ತವೆಷ್ಟು ಎನ್ನುವ ಬಗ್ಗೆ ಸರ್ಕಾರ ಮಾಹಿತಿ ನೀಡಿಲ್ಲ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...