More

    29ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

    ಚಿತ್ರದುರ್ಗ: ಸೆಕೆಂಡ್‌ಪಿಯುಸಿ ಪೂರಕ ಪರೀಕ್ಷೆ ಜಿಲ್ಲೆಯ 9ಪರೀಕ್ಷಾ ಕೇಂದ್ರಗಳಲ್ಲಿ ಏ.29ರಿಂದ ಮೇ 16ರವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹೇಳಿದರು. ಡಿಸಿ ಕಚೇರಿಯಲ್ಲಿ ಸೋಮವಾರ ಪೂರಕ ಪರೀಕ್ಷಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅ ವರು,ಚಿತ್ರದುರ್ಗದಲ್ಲಿ 3,ಚಳ್ಳಕೆರೆ 2 ಹಾಗೂ ಹಿರಿಯೂರು,ಹೊಸದುರ್ಗ,ಮೊಳಕಾಲ್ಮೂರು ಮತ್ತು ಹೊಳಲ್ಕೆರೆ ತಾಲೂಕುಗಳ ತಲಾ ಒಂದೊಂ ದು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಯಾವುದೇ ಅಕ್ರಮಗಳು ನಡೆಯದಂತೆ, ಪಾರದರ್ಶಕ ಹಾಗೂ ಮುಕ್ತವಾಗಿ ನಡೆಸ ಬೇಕೆಂದು ಸಂ ಬಂಧಿಸಿದ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು,ನೆರಳು,ಶೌ ಚಾಲಯ ಮುಂತಾದ ಸೌಲಭ್ಯಗಳಿರಬೇಕೆಂದರು.
    ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ವಿದ್ಯುನ್ಮಾನ ಪರಿಕರ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿ ಸಲಾಗಿದೆ. ಪರೀಕ್ಷಾರ್ಥಿಗಳು ಪರೀಕ್ಷೆ ಆರಂಭಗೊಳ್ಳುವ ಅರ್ಧ ಗಂಟೆಗೂ ಮುನ್ನ ಕೇಂದ್ರದಲ್ಲಿ ಹಾಜರಿರಬೇಕು. ಸುರಕ್ಷತಾ ಕ್ರಮವಾಗಿ ಪೊ ಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಬೇಕೆಂದರು.
    ಪರೀಕ್ಷೆಗಳ ಮೇಲ್ವಿಚಾರಣೆಗಾಗಿ ತ್ರಿಸದಸ್ಯ ಅಧಿಕಾರಿಗಳ ತಂಡ,ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ವಿಚಕ್ಷಣಾ ದಳವನ್ನೂ ನಿಯೋಜಿ ಸ ಲಾಗಿದೆ. ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತ ನಿಷೇಧಾ ಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿ ಸುತ್ತಮುತ್ತಲ ಪ್ರದೇಶದಲ್ಲಿರುವ ಝೆರಾಕ್ಸ್ ಮತ್ತಿತರ ಅಂಗಡಿಗಳು ತೆರೆಯುವಂತಿಲ್ಲವೆಂದರು.
    ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts