ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಚರಂಡಿಗೆ ಬಸ್​ ಬಿದ್ದು 29 ಸಾವು, 17 ಮಂದಿಗೆ ಗಾಯ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಲಖನೌ: ಆರು ಪಥದ ಯುಮುನಾ ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್​​ ಸ್ಕಿಡ್​​ ಆದ ಪರಿಣಾಮ ರಸ್ತೆ ನಡುವಿನ ಸೇತುವೆಯಿಂದ ಬಹುದೊಡ್ಡ ಚರಂಡಿಗೆ ಬಿದ್ದು ಸುಮಾರು 29 ಮಂದಿ ಸಾವಿಗೀಡಾಗಿ, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರಂತ ಸೋಮವಾರ ಬೆಳಗ್ಗೆ ನಡೆದಿದೆ.

165 ಕಿ.ಮೀ. ಇರುವ ಯಮುನಾ ಎಕ್ಸ್​ಪ್ರೆಸ್‌ ವೇ ಗ್ರೇಟರ್​ ನೋಯ್ಡಾದಿಂದ ಉತ್ತರ ಪ್ರದೇಶದ ಆಗ್ರಾವನ್ನು ಸಂಪರ್ಕಿಸುತ್ತದೆ. ಸುಮಾರು 46 ಪ್ರಯಾಣಿಕರನ್ನು ಹೊತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ದೆಹಲಿಗೆ ತೆರಳುತ್ತಿದ್ದ ಬಸ್​ ರಸ್ತೆಯ ನಡುವೆ ಸ್ಕಿಡ್​ ಆಗಿ ಸೇತುವೆಯಿಂದ ಸುಮಾರು 40 ಅಡಿ ಆಳವಿರುವ ಚರಂಡಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ ಯುಪಿ ಪೊಲೀಸರು ಟ್ವೀಟ್​ ಮಾಡಿ ಮಾಹಿತಿ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ಒನ್​ ಸ್ಲೀಪರ್​ ಕೋಚ್​ ಬಸ್​ ಆಗಿದ್ದು, ದುರಂತ ಸಂಭವಿಸುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್​ ಚರಂಡಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಆಗ್ರಾ ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಚರಂಡಿಗೆ ಬಿದ್ದಿರುವುದರಿಂದ ಬಸ್​ನ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್​​ನ ಮೇಲ್ಭಾಗದ ಕಬ್ಬಿಣದ ಬಿಡಿ ಭಾಗಗಳನ್ನು ಸರಿಸಿ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಚರಂಡಿಯಾಗಿರುವುದರಿಂದ ರಕ್ಷಣ ಕಾರ್ಯಾಚರಣೆಗೆ ತೊಡಕಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಹಾಗೂ ಸಾವಿಗೀಡಾದ ಕುಟುಂಬದವರಿಗೆ ಸಹಾಯಾಸ್ತ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....