181 ಮಂದಿ ಪ್ರಯಾಣಿಕರಿದ್ದ Plane ಪತನ; 29 ಮಂದಿ ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

Plane Crash
Published on

ದಕ್ಷಿಣ ಕೊರಿಯಾ: 181 ಪ್ರಯಾಣಿಕರಿದ್ದ ವಿಮಾನವೊಂದು (Plane) ಲ್ಯಾಂಡಿಂಗ್ ವೇಳೆ ಪತನವಾಗಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಅವಘಡದಲ್ಲಿ 29 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.

ದಕ್ಷಿಣ ಜಿಯೋಲ್ಲಾ ಪ್ರಾಂತ್ಯದ ಜಿಯೋಲಾದಲ್ಲಿ ಈ ಘಟನೆ ನಡೆದಿದ್ದು, ಥೈಲ್ಯಾಂಡ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ಫ್ಲೈಟ್ 2216 ವಿಮಾನವು ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಅಥವಾ ಲ್ಯಾಂಡಿಗ್ ಗೇರ್​ ವೈಫಲ್ಯದಿಂದಾಗಿ ಪತನವಾಗಿರಬಹುದು ಎಂದು ಭಾವಿಸಿದ್ದೇವೆ. ವಿಮಾನದಲ್ಲಿ ಒಟ್ಟು 101 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 175 ಮಂದಿ ಪ್ರಯಾಣಿಕರಾದರೆ 6 ಮಂದಿ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೋಕ್, ಸಿಬ್ಬಂದಿಯನ್ನು ಉಳಿಸಲು ಎಲ್ಲಾ ಸಂಬಂಧಿತ ಏಜೆನ್ಸಿಗಳು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net