ರಾಜ್ಯದಲ್ಲಿ 1,240ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ; ನಾಲ್ವರು ಸಾವು

corona virus
Published on

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 298 ಕೋವಿಡ್​ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ಕಳೆದ 24 ಘಂಟೆಯಲ್ಲಿ 7,791 ಜನರಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರು ನಗರದಲ್ಲಿ 172 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಇಬ್ಬರು, ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿದಂತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.

ಹಾಸನ 19, ಮೈಸೂರು 18, ಮಂಡ್ಯ 11, ದಕ್ಷಿಣ ಕನ್ನಡ 11, ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಾವಣಗೆರೆ 1, ಧಾರವಾಡ 3, ಗದಗ 1, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4 ಮತ್ತು ವಿಜಯನಗರದಲ್ಲಿ 5 ಪ್ರಕರಣಗಳು ಪತ್ತೆಯಾಗಿದೆ.

ಜ್ಯದಲ್ಲಿ ಕರೊನಾ ಪಾಸಿಟಿವಿಟಿ ದರ ಶೇ. 3.82ರಷ್ಟಿದೆ. 229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net