More

    ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ: ಶಾಸಕ ಯತ್ನಾಳರ ಹೋರಾಟ ರಾಜಕೀಯ ಪ್ರೇರಿತ

    ವಿಜಯಪುರ : ಜಿಲ್ಲೆಯ ಪಂಚಮಸಾಲಿ ಸಮಾಜಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಕೊಡುಗೆ ಏನು ? ಅವರ 2ಎ ಮೀಸಲಾತಿ ಹೋರಾಟ ಕೇವಲ ರಾಜಕೀಯ ಪ್ರೇರಿತವಾಗಿದೆ ಎಂದು ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಡಾ.ಸುರೇಶ ಬಿರಾದಾರ ಅಸಮಾಧಾನ ಹೊರಹಾಕಿದರು.

    ವಿನಾಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಹಾಗೂ ಸಚಿವ ಮುರುಗೇಶ ನಿರಾಣಿ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು. ಇಲ್ಲವಾದರೆ ಯತ್ನಾಳ ಅವರ ಹಗರಣಗಳನ್ನು ಬಯಲಿಗೆಳೆಯಬೇಕಾಗುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ನಾನು ಸಹ ಯತ್ನಾಳ ಅವರ ಬೆನ್ನುಲುಬಾಗಿಯೇ ಇದ್ದೆ, ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಯ ಸಂದರ್ಭದಲ್ಲಿಯೇ ರಾಣಿ ಚನ್ನಮ್ಮ ಮೂರ್ತಿ ಸ್ಥಾಪನೆ ಮಾಡೋಣ ಎಂದು ಹೇಳಿದ್ದೆ, ಆದರೆ ಇಲ್ಲಿಯವರೆಗೂ ಆಗಿಲ್ಲ. ಯತ್ನಾಳ ಅವರು ರಾಜಕೀಯ ಪ್ರೇರಿತದಿಂದ ಹೋರಾಟಕ್ಕಿಳಿದ್ದಾರೆ. ಈ ಹಿಂದೆ ಜಯಮೃತ್ಯುಂಜಯ ಸ್ವಾಮೀಜಿಗೆ ಟೀಕೆ ಮಾಡಿದ್ದರು. ಇನ್ನು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ನೇತೃತ್ವ ವಹಿಸಿದ್ದವರೇ ಇಂದು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟದಲ್ಲಿ ಇದ್ದಾರೆ. ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ಶಿವಶಂಕರ್, ಮಾಜಿ ಸಚಿವ ವಿನಯ ಕುಲಕರ್ಣಿ ಮೊದಲಾದವರು ಪ್ರತ್ಯೇಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಈಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಂದೊಂದು ಪಂಚಮಸಾಲಿ ಸಮಾಜವನ್ನು ಒಡೆಯುವ ಹುನ್ನಾರ ಎಂದರು.

    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಮುರುಗೇಶ ನಿರಾಣಿ ಹಾಗೂ ವಿಜಯೇಂದ್ರ ಅವರನ್ನು ಟಾರ್ಗೆಟ್ ಮಾಡಿ ಯತ್ನಾಳ ಮಾತನಾಡುತ್ತಾರೆ. ಚುನಾವಣೆ ಲಾಭಕ್ಕಾಗಿ ಹೋರಾಟ ಮಾಡುವುದನ್ನು ನಿಲ್ಲಿಸಬೇಕು.

    ಪಂಚಮಸಾಲಿ 3ನೇ ಪೀಠದ ಅಧ್ಯಕ್ಷ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್‌ವೈ ಪ್ರಾಮಾಣಿಕವಾದ ಪ್ರಯತ್ನ ನಡೆಸುತ್ತಿದ್ದಾರೆ. ಮೀಸಲಾತಿ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.
    ಬುರಾಣಪುರ ಆರೂಢಾಶ್ರಮದ ಯೋಗೇಶ್ವರಿ ಮಾತಾಜಿ, ಲಕ್ಷ್ಮಣ ಮುತ್ಯಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts