ಕರ್ನಾಟಕ ಕಾಂಗ್ರೆಸ್ ಆಡಳಿತ ದೇಶಕ್ಕೆ ಮಾದರಿ : ಪುಷ್ಪಾ ಅಮರನಾಥ್ ಬಣ್ಣನೆ

New Project (3)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ವಿರೋಧಿಸಿದವರೇ ಇಂದು ಕರ್ನಾಟಕದ ಕಾಂಗ್ರೆಸ್ ಆಡಳಿತವನ್ನು ನಕಲು ಮಾಡಿಕೊಂಡು ಅಧಿಕಾರಕ್ಕೆ ಬರಲು ಯತ್ನಿಸಿದ್ದಾರೆ. ದೇಶಕ್ಕೆ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮಾಡೆಲ್ ಆಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಬಡವರ ಜೀವನಕ್ಕೆ ಬೆಳಕು ನೀಡುವ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಪಂಚ ಗ್ಯಾರಂಟಿ ಸರ್ಕಾರಕ್ಕೆ 2ನೇ ವರ್ಷದ ಸಂಭ್ರಮದ ಪ್ರಯುಕ್ತ ಮಂಗಳವಾರ ಬಿ.ಸಿ.ರೋಡಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಆಯೋಜಿಸಿದ ಸಂಭ್ರಮೋತ್ಸವ ಉದ್ಘಾಟಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಪುಸ್ತಕವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಯೋಜನೆಯ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ, ಜಿ.ಪಂ. ಉಪಕಾರ್ಯದರ್ಶಿ ಕೆ.ಇ.ಜಯರಾಮ್, ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸಿಡಿಪಿಒ ಇಲಾಖೆ ಉಪನಿರ್ದೇಶಕ ಉಸ್ಮಾನ್, ಜಿಲ್ಲಾಮಟ್ಟದ ಅಧಿಕಾರಿಗಳಾದ ಆನಂದ, ವೈ.ಎಂ.ಬಡಿಗೇರ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ತಾಲೂಕುಮಟ್ಟದ ಅಧಿಕಾರಿಗಳಾದ ಪ್ರದೀಪ್ ಡಿಸೋಜ, ಸಚಿನ್ ಕುವಾರ್, ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ರಾಮಲಿಂಗಯ್ಯ, ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಮೆಸ್ಕಾಂ ಅಧಿಕಾರಿ ವೆಂಕಟೇಶ್, ಜಿ.ಎಚ್.ಅನಿತಾ, ಸುರೇಖಾ ಚಂದ್ರಹಾಸ್, ಜೋಕಿಂ ಡಿಸೋಜ, ತಾಲೂಕು ಸಮಿತಿಗಳ ಅಧ್ಯಕ್ಷರಾದ ಸುಧೀರ್ ಕುಮಾರ್, ಉಮಾನಾಥ್ ಶೆಟ್ಟಿ, ಸಾಹುಲ್ ಹಮೀದ್, ಪದ್ಮನಾಭ ಸಾಲ್ಯಾನ್ ಮೊದಲಾದವರಿದ್ದರು. ಸಮಿತಿ ಸದಸ್ಯ ವಿನಯ ಕುಮಾರ್ ಸಿಂಧ್ಯಾ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿ ಕೊಡಾಜೆ ನಿರೂಪಿಸಿದರು.

ಗೌರವಾರ್ಪಣೆ, ಮೆರವಣಿಗೆ

ಕಾರ್ಯಕ್ರಮದ ಪೂರ್ವಭಾವಿಯಾಗಿ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವತ್ತದ ಬಳಿ ಎರಡು ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕರು ಹಾಗೂ ನಿರ್ವಾಹಕರನ್ನು ಗೌರವಿಸಲಾಯಿತು. ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು. ಬಳಿಕ ಸ್ಪರ್ಶಾ ಕಲಾಮಂದಿರದವರೆಗೆ ಮೆರವಣಿಗೆ ನಡೆಯಿತು.

ಇದು ಮಹಿಳಾ ಸಬಲೀಕರಣದ ಕಾರ್ಯಕ್ರಮವಾಗಿದ್ದು, ಮಹಿಳೆಯೊಬ್ಬರು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆಯಾಗಿ ಸ್ವತಂತ್ರವಾಗಿ ಕಾರ್ಯಕ್ರಮ ಸಂಟಿಸಿರುವುದು ಶ್ಲಾಘನೀಯ. ಸರ್ಕಾರ ನೀಡಿದ ಭರವಸೆಗಳು ಈಡೇರಿವೆ. ಆರಂಭದಲ್ಲಿ ಈ ಯೋಜನೆಗಳಿಂದ ಆರ್ಥಿಕ ದಿವಾಳಿ ಆಗುತ್ತದೆ ಎಂದು ಟೀಕಿಸಿದರೂ ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿರುವುದು ಸರ್ಕಾರದ ದಕ್ಷ ಆಡಳಿತಕ್ಕೆ ಸಾಕ್ಷಿ. ಬಿ.ರವಾನಾಥ ರೈ, ಮಾಜಿ ಸಚಿವರು https://www.vijayavani.net/private-ambulance-108-mangalore https://www.vijayavani.net/talapadi-chengal-six-lane-work-is-almost-complete

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net