More

    ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2ನೇ ಐಟಿಐ ಘಟಿಕೋತ್ಸವ

    ನಾಗಮಂಗಲ: ಕೌಶಲ ಕಲಿತವರಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಎಸ್.ಹೇಮಂತ್‌ಕುಮಾರ್ ತಿಳಿಸಿದರು.

    ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ 2ನೇ ಐಟಿಐ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೈಗಾರಿಕಾ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳು ನಡೆಯುತ್ತಿದ್ದು, ಅವುಗಳ ಮಾಹಿತಿ ಪಡೆದು ದೇಶಕ್ಕೆ ಯಾವ ಕೊಡುಗೆ ನೀಡಬಹುದು ಎಂಬುದರ ಕುರಿತು ವಿದ್ಯಾರ್ಥಿಗಳು ಗಂಭೀರ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆ ಆಡಳಿತಾಧಿಕಾರಿ ಎಚ್.ಪಿ.ಲೋಕೇಶ್, ಉತ್ತಮ ವ್ಯಕ್ತಿತ್ವ, ನಾಯಕತ್ವ ಗುಣ ಹೊಂದಿದವರನ್ನು ವಿದ್ಯಾರ್ಥಿಗಳು ಮಾದರಿಯಾಗಿಟ್ಟುಕೊಂಡು ಸಾಧನೆ ಮಾಡಬೇಕು ಎಂದರು.

    ಪ್ರಸಕ್ತ ಸಾಲಿನಲ್ಲಿ ತೇರ್ಗಡೆಯಾದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪ್ರಮಾಣಪತ್ರ ನೀಡಲಾಯಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ಬಿ.ಎಸ್.ಚನ್ನಕೇಶವ, ಕೆ.ಪಿ.ಚಾಮರಾಜು, ಸಿಬ್ಬಂದಿ ಜೆ.ನಾಗರಾಜು, ಪುರುಷೋತ್ತಮ್, ಮೋಹನ್, ರಾಜ್ಯ ಯುವಪ್ರಶಸ್ತಿ ಪುರಸ್ಕೃತ ಜಿ.ಬೊಮ್ಮನಹಳ್ಳಿ ವಿಜಯಕುಮಾರ್ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts