More

    ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ ಲೋಪ ಸರಿಪಡಿಸಿದ ಮಂಡಳಿ

    ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ್ದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆಯಲ್ಲಿದ್ದ ಲೋಪಗಳನ್ನು ಸರಿಪಡಿಸಲಾಗಿದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

    ಇತ್ತೀಚೆಗೆ ‘ವಿಜಯವಾಣಿ’ ಸೇರಿ ವಿವಿಧ ಮಾಧ್ಯಮಗಳಲ್ಲಿ ಪ್ರಶ್ನೆಪತ್ರಿಕೆಗಳಲ್ಲಿದ್ದ ಲೋಪದ ಕುರಿತು ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಲೋಪಗಳನ್ನು ಮಂಡಳಿಯು ಸರಿಪಡಿಸಿಕೊಂಡಿದೆ.

    ಪರಿಷ್ಕೃತ ಪ್ರಶ್ನೆಪತ್ರಿಕೆಯನ್ನು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಕಾಲೇಜು ಉಪನ್ಯಾಸಕರು ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts