More

    ದ್ವಿತೀಯ ಪಿಯು ಫಲಿತಾಂಶ: ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ..

    ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶುಕ್ರವಾರ (ಏಪ್ರಿಲ್​ 21) ಪ್ರಕಟಗೊಂಡಿದ್ದು, ಈ ಬಾರಿ ಶೇ.78.97 ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.13 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಕಳೆದ ಬಾರಿ ಶೇ. 61.88 ಫಲಿತಾಂಶ ಬಂದಿತ್ತು.

    ಶುಕ್ರವಾರ ಬೆಳಗ್ಗೆ 10.00ಕ್ಕೆ ಮಲ್ಲೆಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (ಕೆಎಸ್​ಇಎಬಿ) ಯ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಭಾಗಿಯಾಗಿದರು.

    ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಯಾದಗಿರಿಗೆ ಕೊನೇ ಸ್ಥಾನ

    ಈ ಬಾರಿ ದಕ್ಷಿಣ ಕನ್ನಡ ಶೇ. 95.33 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದರೆ, ಯಾದಗಿರಿ ಶೇ. 62.98 ಫಲಿತಾಂಶದೊಂದಿಗೆ ಮತ್ತೊಮ್ಮೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ದಕ್ಷಿಣ ಕನ್ನಡ ಶೇ. 88.02 ಫಲಿತಾಂಶದೊಂದಿಗೆ ಕಳೆದ ಬಾರಿಯೂ ಮೇಲುಗೈ ಸಾಧಿಸಿತ್ತು. ಕಳೆದ ಬಾರಿ ಶೇ, 60.59 ಫಲಿತಾಂಶದೊಂದಿಗೆ 23ನೇ ಸ್ಥಾನದಲ್ಲಿದ್ದ ಯಾದಗಿರಿ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಕಳೆದ ಬಾರಿ ಶೇ. 49.31 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದ್ದ ಚಿತ್ರದುರ್ಗ ಈ ಬಾರಿ ಶೇ.69.5 ಫಲಿತಾಂಶದೊಂದಿಗೆ 28ನೇ ಸ್ಥಾನಕ್ಕೆ ಜಿಗಿದಿದೆ.

    ಹಲವು ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ಅದರಲ್ಲಿ ಗಣಕ ವಿಜ್ಞಾನದಲ್ಲಿ 5335 ವಿದ್ಯಾರ್ಥಿನಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ಉಳಿದಂತೆ ಗಣಿತ ಶಾಸ್ತ್ರದಲ್ಲಿ 2,704 ವಿದ್ಯಾರ್ಥಿಗಳು, ಇಂಗ್ಲಿಷ್​ನಲ್ಲಿ ಕೇವಲ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ. ಕನ್ನಡದಲ್ಲಿ 1083 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ.

    2nd PU Result

    ಈ ಬಾರಿ ಪರೀಕ್ಷೆಗೆ 7,27,923 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. https://pue.karnataka.gov.in/ ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

    ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಯಾದಗಿರಿಗೆ ಕೊನೇ ಸ್ಥಾನ

    ‘ಮಳೆಯಲ್ಲಿ ಸಾಂಗ್​ ಶೂಟಿಂಗ್​ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿ ಸರ್ ಗಲಿಬಿಲಿಗೊಂಡಿದ್ದರು’

    ನನಗೆ ಪೂರ್ಣಾ ಜೊತೆ ಲವ್ ಅಫೇರ್ ಇದೆ ಆದರೆ… ನಟ, ನಿರ್ದೇಶಕ ರವಿಬಾಬು ಶಾಕಿಂಗ್​ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts