More

    ಏ.10ರ ಹೊತ್ತಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

    ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯ ಹಂತಕ್ಕೆ ಬಂದಿದ್ದು, ಏ.10ರ ಆಸುಪಾಸಲ್ಲಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

    ಮಾರ್ಚ್ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದೆ. ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1ರ ಫಲಿತಾಂಶ  ಏಪ್ರಿಲ್ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಏ.10ರಂದು ಇದನ್ನು ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ. ಏ.10 ಅಥವಾ ನಂತರದ ಒಂದೆರಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

    ಮೈಸೂರು ಮಹಾರಾಜ ಯದುವೀರ್‌ ಬಳಿ ಸ್ವಂತ, ಮನೆ ಕಾರೂ ಇಲ್ಲ; ಆದ್ರೂ 4.99 ಕೋಟಿ ರೂ. ಆಸ್ತಿ ಮೌಲ್ಯದ ಒಡೆಯ

    VIDEO; ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಪ್ರೆಗ್ನೆಂಟ್!..ಸುಳಿವು ಕೊಟ್ಟ ಸುನೀಲ್ ಶೆಟ್ಟಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts