26.8 C
Bangalore
Friday, December 13, 2019

3 ದಿನದೊಳಗೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಶಿವಮೊಗ್ಗ: ಕಳೆದ ವಾರ ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ಒಂದು ಸಾವಿರ ಸಂತ್ರಸ್ತರು ನಗರದ 3 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 346 ಮನೆಗಳು ಸಂಪೂರ್ಣ ಕುಸಿದಿದ್ದು, 825 ಮನೆಗಳಿಗೆ ಭಾಗಶಃ ಹಾನಿಗೀಡಾಗಿವೆ. ಸಂತ್ರಸ್ತರಿಗೆ 3 ದಿನಗಳೊಳಗೆ ತಾತ್ಕಾಲಿಕ ಪರಿಹಾರ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ತಿಳಿಸಿದರು.

ನೆರೆ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಪಾಲಿಕೆಯೊಂದಿಗೆ ಕೈಜೋಡಿಸಿ, ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ನೆರೆ ನೀರಿನಲ್ಲಿ ಎರಡು ದಿನಗಳ ಕಾಲ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ತಲೆದೋರಿರುವ ಆರೋಗ್ಯ ಸಮಸ್ಯೆ ಅರಿತು, ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಅಗ್ನಿಶಾಮಕ ದಳದ ಕಚೇರಿಗೆ ವೈದ್ಯಕೀಯ ತಂಡವನ್ನು ಪಾಲಿಕೆಯಿಂದ ಕಳುಹಿಸಲಾಗಿದೆ ಎಂದು ಗುರುವಾರ ಮಾಧ್ಯಮಗಳಿಗೆ ತಿಳಿಸಿದರು.

ಮೀನುಗಾರರು ಪ್ರವಾಹ ಸಂದರ್ಭದಲ್ಲಿ ತಮ್ಮ ತೆಪ್ಪಗಳನ್ನು ಬಳಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದರಲ್ಲಿ ಬಹಳಷ್ಟು ತೆಪ್ಪಗಳು ಹಾನಿಗೀಡಾಗಿವೆ. ಪರಿಹಾರ ಕಾರ್ಯನಿರ್ವಹಿಸಿದ 30 ಮೀನುಗಾರರನ್ನು ಗುರುತಿಸಿ ಅವರಿಗೆ ಪಾಲಿಕೆಯಿಂದ ತೆಪ್ಪಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಅಂಗನವಾಡಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ಸಿಎಸ್​ಆರ್ ಯೋಜನೆಯಡಿ 6 ಮಾದರಿ ಅಂಗನವಾಡಿಗಳನ್ನು ನಿರ್ವಿುಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

260 ಕೋಟಿ ರೂ. ಹಾನಿ:

ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಚರಂಡಿಗಳಿಗೆ ಅತಿವೃಷ್ಟಿಯಿಂದ 124.8 ಕೋಟಿ ರೂ. ನಷ್ಟವಾಗಿದೆ. ಅಂಗನವಾಡಿ, ಶಾಲೆಗಳು ಸೇರಿ 250 ಸಾರ್ವಜನಿಕ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ಕುಡಿಯುವ ನೀರಿನ ವ್ಯವಸ್ಥೆಗೆ 5 ಕೋಟಿ ರೂ., ವಿದ್ಯುತ್ ಸಂಪರ್ಕಕ್ಕೆ 18 ಲಕ್ಷ ರೂ. ಮತ್ತು ಯುಜಿಡಿಗೆ 5 ಕೋಟಿ ರೂ. ನಷ್ಟ ಉಂಟಾಗಿದೆ.

ಹಾನಿಗೊಳಗಾದ ರಸ್ತೆ, ಚರಂಡಿ, ಕಟ್ಟಡಗಳ ರಿಪೇರಿ ಇಲ್ಲವೇ ಮರು ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದರು.

1,550 ಕಿಟ್: ದಾನಿಗಳಿಂದ ಪಡೆಯಲಾಗಿರುವ ವಸ್ತುಗಳನ್ನು ಪರಿಹಾರದ ಕಿಟ್​ಗಳಾಗಿ ಸಿದ್ಧಪಡಿಸಲಾಗಿದೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಬಟ್ಟೆಗಳನ್ನೊಳಗೊಂಡ ಕಿಟ್ ಸಿದ್ಧಪಡಿಸಲಾಗಿದೆ. ಪರಿಹಾರ ಕೇಂದ್ರಗಳಲ್ಲಿರುವವರಿಗೆ ಪ್ರಥಮ ಹಂತದಲ್ಲಿ ಇವುಗಳನ್ನು ನೀಡಲಾಗುತ್ತಿದ್ದು, ಇದುವರೆಗೆ 1,550 ಕಿಟ್ ವಿತರಣೆ ಮಾಡಲಾಗಿದೆ. ಮುಂದಿನ ಹಂತದಲ್ಲಿ ಭಾಗಶಃ ಮನೆ ಹಾನಿಗೀಡಾದ ಕುಟುಂಬಗಳಿಗೆ ಕಿಟ್ ವಿತರಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದರು.

ಸಂತ್ರಸ್ತರಿಗೆ ನೀಡಲು ಆರು ಸಾವಿರ ಆಹಾರದ ಕಿಟ್ ಅಗತ್ಯವಿದೆ. ಪ್ರಸ್ತುತ ಎರಡು ಸಾವಿರ ಕಿಟ್ ಲಭ್ಯವಿದೆ. ಆಹಾರ ಕಿಟ್​ನಲ್ಲಿ 10 ಕೆಜಿ ಅಕ್ಕಿ, ಒಂದು ಕೆಜಿ ಬೇಳೆ, ಒಂದು ಕೆಜಿ ಸಕ್ಕರೆ, ಉಪ್ಪು ಹಾಗೂ ಒಂದು ಲೀ. ಅಡುಗೆ ಎಣ್ಣೆ ಇರಲಿದೆ. ಎಲ್ಲ ಸಂತ್ರಸ್ತರಿಗೆ ಅಗತ್ಯ ವಸ್ತುಗಳು ತಲುಪುವಂತಾಗಲು ದಾನಿಗಳು ನಗರ ಪಾಲಿಕೆ ಮೂಲಕ ಪರಿಹಾರ ವಿತರಣೆಗೆ ಕೈಜೋಡಿಸಬೇಕು ಎಂದು ಹೇಳಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....