More

    3 ದಿನದಲ್ಲಿ ರಾಗಿ ಖರೀದಿ ತೀರ್ಮಾನ, ಸಚಿವ ಬಿ.ಸಿ. ಪಾಟೀಲ್ ಮಾಹಿತಿ, ಕನಸವಾಡಿಯಲ್ಲಿ ರೈತ ಸಂಪರ್ಕ ಕೇಂದ್ರ ಉದ್ಘಾಟನೆ

    ದೊಡ್ಡಬಳ್ಳಾಪುರ: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಅವಧಿ ವಿಸ್ತರಣೆ ಬಗ್ಗೆ ಸಿಎಂ ಜತೆ ಚರ್ಚಿಸಲಾಗಿದ್ದು, 3 ದಿನದಲ್ಲಿ ತೀರ್ಮಾನ ಹೊರಬೀಳಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    ಕನಸವಾಡಿಯಲ್ಲಿ ಗುರುವಾರ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಎಕರೆಗೆ 10 ಕ್ವಿಂಟಾಲ್ ರಾಗಿ ಖರೀದಿ ಮಿತಿ ಹೆಚ್ಚಿಸುವ ಹಂತದಲ್ಲೂ ಪರಿಷ್ಕರಣೆ ನಡೆಯುತ್ತಿದೆ ಎಂದರು.

    ಮೂರನೇ ಅಲೆ ಆತಂಕವಿಲ್ಲ: ಕರೊನಾ ಮೊದಲ ಹಾಗೂ ಎರಡನೇ ಅಲೆಗೆ ಹೋಲಿಸಿದರೆ ಮೂರನೇ ಅಲೆ ತೀವ್ರತೆ ಇಲ್ಲ, ಸೌಮ್ಯ ರೋಗಲಕ್ಷಣಗಳಿದ್ದು, ನಾಲ್ಕೈದು ದಿನಗಳಲ್ಲಿ ಸೋಂಕಿನಿಂದ ಗುಣಮುಖರಾಗಬಹುದು. ಆದ್ದರಿಂದ ಸಹಜ ಜೀವನಕ್ಕೆ ಯಾವುದೇ ತೊಂದರೆಯಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

    ಜಿಲ್ಲೆಯಲ್ಲಿ ನೂತನ ಜಿಲ್ಲಾಸ್ಪತ್ರೆ ನಿರ್ಮಾಣ ಸಂಬಂಧ ಪ್ರಸ್ತಾವನೆಯಿದ್ದು, ಶೀಘ್ರದಲ್ಲೇ ಕಾರ್ಯಗತವಾಗಲಿದೆ. ಇದರೊಂದಿಗೆ ಹೊಸಕೋಟೆಯಲ್ಲಿ ತಾಯಿ ಮಗು ಆಸ್ಪತ್ರೆಯೂ ನಿರ್ಮಾಣವಾಗಲಿದೆ ಎಂದು ಹೇಳಿದರು.

    ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯಿಂದ ಕೇಂದ್ರದ ನೀತಿ ಆಯೋಗದ ನಿಯಮದಂತೆ ಕಾರ್ಯಗತವಾಗಲಿದೆ ಎಂದ ಸಚಿವ ಸುಧಾಕರ್, ಎಲ್ಲ ಜಿಲ್ಲೆಗಳಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಸ್ತಾವನೆಯಿದ್ದು, ಇನ್ನು ಐದು ವರ್ಷದ ಅವಧಿಯಲ್ಲಿ ಎಲ್ಲವೂ ಕಾರ್ಯಗತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಹಲವು ಸೌಲಭ್ಯ ನೀಡುತ್ತಿದೆ. ರೈತರು ಇವುಗಳ ಸದ್ಬಳಕೆ ಮಾಡಿಕೊಂಡು ಪ್ರಗತಿ ಕಾಣಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.’

    ರೈತ ಸಂಪರ್ಕ ಕೇಂದ್ರಗಳು ರೈತಾಪಿ ವರ್ಗಕ್ಕೆ ವರದಾನವಾಗಿದೆ. ಇಲ್ಲಿನ ಸಿಬ್ಬಂದಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ರೈತರ ಕೆಲಸ ಕಾರ್ಯಗಳನ್ನು ಸರಳಗೊಳಿಸಬೇಕು ಎಂದು ಹೇಳಿದರು.

    ಜೋಳಕ್ಕೂ ಬೆಂಬಲ ಬೆಲೆ ನೀಡಿ: ರಾಜ್ಯ ರೈತಸಂಘ ಹಾಗೂ ಸ್ಥಳೀಯ ರೈತರು ರಾಗಿ ಖರೀದಿ ಅವಧಿ ವಿಸ್ತರಣೆ ಸೇರಿ ಜೋಳವನ್ನೂ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಂತೆ ಕೃಷಿ ಸಚಿವರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕೃಷಿ ಉಪಕರಣಗಳ ಪ್ರದರ್ಶನವನ್ನು ಸಚಿವರು ವೀಕ್ಷಣೆ ಮಾಡಿದರು.

    ಎಂಟಿಬಿಗೆ ಡಾಕ್ಟರ್ ಶಹಬ್ಬಾಸ್: ಜಿಲ್ಲೆಯಲ್ಲಿ ಕೋವಿಡ್ ಮೊದಲ ಡೋಸ್ ವಿತರಣೆಯಲ್ಲಿ ಶೇ.100 ಸಾಧನೆಯಾಗಿದ್ದು, ಎರಡನೇ ಡೋಸ್ ಶೇ.98 ಪ್ರಗತಿಯಲ್ಲಿದೆ, ಇನ್ನೆರಡು ದಿನಗಳಲ್ಲಿ ಅದೂ ಶೇ.100 ಪ್ರಗತಿ ಕಾಣಲಿದೆ, ಇದಕ್ಕೆ ಕೋವಿಡ್ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಎಂಟಿಬಿ ನಾಗರಾಜ್ ಪರಿಶ್ರಮ ಕಾರಣ ಎಂದು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಶಹಬ್ಬಾಸ್‌ಗಿರಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts