More

    ‘ಓದು-ಬರಹ ಅಭಿಯಾನದಡಿ 3.2 ಲಕ್ಷ ಜನರಿಗೆ ಅಕ್ಷರ ಜ್ಞಾನ’

    ಬೆಂಗಳೂರು : ಕೇಂದ್ರ ಸರ್ಕಾರ ಪ್ರಾಯೋಜಿತವಾದ ಓದು-ಬರಹ (ಪಢನಾ-ಲಿಖನಾ) ಅಭಿಯಾನಕ್ಕೆ ರಾಜ್ಯದಲ್ಲಿ ಏಪ್ರಿಲ್ 2 ರಂದು ಚಾಲನೆ ನೀಡಿ, ಮೇ ತಿಂಗಳೊಳಗೆ 3.2 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿನ 24 ತಾಲ್ಲೂಕು, 219 ಗ್ರಾಮ ಪಂಚಾಯಿತಿ ಮತ್ತು 19 ನಗರ, ಪಟ್ಟಣ ಪ್ರದೇಶಗಳಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. 15 ರಿಂದ 50 ವರ್ಷದ 2.4 ಲಕ್ಷ ಮಹಿಳೆಯರು ಮತ್ತು 80,000 ಪುರುಷ ಅನಕ್ಷರಸ್ಥರಿಗೆ ಅಕ್ಷರ ಕಲಿಸಲಾಗುತ್ತದೆ. ಕಲಿಕೆ ಪೂರ್ಣಗೊಂಡ ನಂತರ ಕಲಿಕಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ ಉತ್ತೀರ್ಣರಾದವರಿಗೆ ಇಲಾಖೆಯಿಂದ ಸಾಕ್ಷರತಾ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದರು.

    ಇದನ್ನೂ ಓದಿ: ಮತ್ತಿನಲ್ಲಿ ಮನೆಯೊಳಗೆ ನುಗ್ಗಿದರು, ವೃದ್ಧೆಯನ್ನು ಹೊಡೆದು ಸಾಯಿಸಿದರು!

    ರಾಜ್ಯದಲ್ಲಿ ಗುರುತಿಸಲಾಗಿರುವ 1.26 ಕೋಟಿ ಅನಕ್ಷರಸ್ಥರ ಪೈಕಿ ಈಗಾಗಲೇ 57 ಲಕ್ಷ ಜನರನ್ನು ಸಾಕ್ಷರರನ್ನಾಗಿ ಮಾಡಲಾಗಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯದಂತೆ ಸಾಕ್ಷರತೆಯ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೊಸ ಸ್ತರಕ್ಕೆ ಕೊಂಡೊಯ್ಯಲು ಇಲಾಖೆಯು ಕ್ರಿಯಾ ಯೋಜನೆಯನ್ನು ರೂಪಿಸುತ್ತಿದೆ. ನವ ಸಾಕ್ಷರರಿಗೆ ಜೀವನೋಪಾಯ ಕೌಶಲ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

    ಇದರೊಂದಿಗೆ, ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾಗಿರುವ ಅನಕ್ಷರಸ್ಥ ಸದಸ್ಯರಿಗೆ ಲೋಕ ಶಿಕ್ಷಣ ನಿರ್ದೇಶನಾಲಯದಿಂದ ನಿರಂತರ ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಹಯೋಗ ಪಡೆಯಲಾಗುವುದು ಎಂದು ಸುರೇಶ್‌ಕುಮಾರ್ ತಿಳಿಸಿದ್ದಾರೆ.

    ಇರ್ಫಾನ್​ಗೆ ಅತ್ಯುತ್ತಮ ನಟ ಮತ್ತು ಜೀವಮಾನ ಸಾಧನೆ ಪ್ರಶಸ್ತಿ; ಹಲವು ಟ್ರೋಫಿ ಗೆದ್ದ ‘ಥಪ್ಪಡ್’ ಚಿತ್ರ

    ಚುನಾವಣಾ ಪ್ರಚಾರದ ನಡುವೆ ದೋಸೆ ಹಾಕಿದ ಖುಷ್​ಬೂ !

    ಚಿಕ್ಕ ಮಕ್ಕಳಲ್ಲಿ ಹೆಚ್ಚಿದ ಕರೊನಾ ಸೋಂಕು; ಎಚ್ಚರವಾಗಿರಲು ಸಲಹೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts