More

    ಮಾಜಿ ಕಾರ್ಪೋರೇಟರ್‌ಗೆ ಸೇರಿದ 3.35 ಕೋಟಿ ರೂ. ಮೌಲ್ಯದ ಆಸ್ತಿ ಇ.ಡಿ. ವಶಕ್ಕೆ..

    ಬೆಂಗಳೂರು: ಅಕ್ರಮ ಹಣಕಾಸು ವಹಿವಾಟು ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಸಿ.ಜಿ. ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

    ಬಿಬಿಎಂಪಿ ಅಜಾದ್‌ನಗರ ವಾರ್ಡ್ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಕಾರ್ಪೋರೇಟರ್ ಆಗಿದ್ದ ಸಮಯದಲ್ಲಿ ಗೌರಮ್ಮ, ಅಧಿಕಾರ ದುರುಪಯೋಗಪಡಿಸಿಕೊಂಡು ಮತ್ತು ತನ್ನ ಪತಿ ಸಿ. ಗೋವಿಂದರಾಜು ಜತೆ ಸೇರಿಕೊಂಡು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದರು. ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮತ್ತು ಸ್ಥಿರಾಸ್ತಿಗಳನ್ನು ಸಂಪಾದನೆ ಮಾಡಿದ್ದರು.

    ಅಂದರೆ 2010ರಿಂದ 13ರ ವರೆಗೆ 3.46 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, ಮನೆ, ಫ್ಲ್ಯಾಟ್​ ಮತ್ತು ವಾಣಿಜ್ಯ ಮಳಿಗೆಗಳನ್ನು ಸಂಪಾದನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು 3.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

    2012ರಲ್ಲಿ ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಗೌರಮ್ಮ, ಗೋವಿಂದರಾಜು ಸೇರಿ 12 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ 2020ರ ಅಕ್ಟೋಬರ್‌ನಲ್ಲಿ ತೀರ್ಪು ನೀಡಿದೆ.

    ವಿಮಾನಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲೇ ಬಚಾವಾದ ಕಾರು!

    ತಿಗಣೆ ಮದ್ದಿಗೆ ಬಲಿಯಾದ್ಲು 6 ವರ್ಷದ ಬಾಲಕಿ; ನಿಜಕ್ಕೂ ಆಗಿದ್ದೇನು? ತಪ್ಪಿತಸ್ಥರು ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts