More

    ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

    ಮಹಾರಾಷ್ಟ್ರ: ಇಲ್ಲಿನ ಪಾಲ್ಗರ್‌ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶ ಪ್ರಜೆಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 23 ರಿಂದ 45 ವರ್ಷ ವಯಸ್ಸಿನ ಮೂವರನ್ನು ಬಂಧಿಸಿದ್ದಾರೆ. ಇವರು ಇಲ್ಲಿನ ವಸಾಯಿ ಪ್ರದೇಶದಲ್ಲಿ ವಾಸವಾಗಿದ್ದರು. ಈ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ವಸಾಯಿ ಪೊಲೀಸ್​ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಸಿಎಎ ಕಾಯ್ದೆ ಕೇಂದ್ರ ಜಾರಿಗೆ ತರಲಿದೆ ಎಂದು ಹೇಳಿದ ಬಳಿಕ ಅಕ್ರಮ ಬಾಂಗ್ಲಾ ವಲಸಿಗರು ತಮ್ಮ ದೇಶಕ್ಕೆ ಹಿಂದಿರುಗುತ್ತಿರುವ ಸಂಖ್ಯೆ ಹೆಚ್ಚಳವಾಗಿತ್ತು. ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಮುಂದಾದ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಕೋವಿಡ್​ ಸಮಯದಲ್ಲಿ ಹೇಳಿದ್ದರು.

    ಪೌರತ್ವ ತಿದ್ದುಪಡಿ ಮಸೂದೆಗೆ ಮಮತಾ ಬ್ಯಾನರ್ಜಿ ಮತ್ತು ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಮಸೂದೆ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಮಮತಾ ಘೋಷಿಸಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಒಂದು ಭಾಗವಾಗಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಮೌನವಾಗಿದೆ. ಹೀಗಾಗಿ ಈ ಬಗ್ಗೆ ಚರ್ಚಿಸಲೇಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಅಂದು ಒತ್ತಾಯಿಸಿದ್ದರು. ಮಮತಾ ಬ್ಯಾನರ್ಜಿ ಅವರು ವೋಟ್​ ಬ್ಯಾಂಕ್​ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪ ಮಾಡಿತ್ತು.

    ಇದುವರೆವಿಗೂ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ಮೇಲೆ ಒಟ್ಟು 764 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳು ದಾಖಲಾಗಿವೆ. ವಿದೇಶಿಯರುಗಳ ವಿರುದ್ಧವೂ 711 ಪ್ರಕರಣಗಳು ದಾಖಲಾಗಿದೆ. ಜೊತೆಗೆ ಒಟ್ಟು 135 ಜನ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅಕ್ರಮ ವಲಸಿಗರಿಗೆ ನಕಲಿ ಆಧಾರ ಕಾರ್ಡ್ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಮಾಡಿ ಕೊಡುತ್ತಿರುವ ಎಂಟಕ್ಕೂ ಅಧಿಕ ಜನ ಮಧ್ಯವರ್ತಿ ಏಜೆಂಟ್‌ಗಳನ್ನು ಪತ್ತೆ ಮಾಡಿ ಹಲವಾರು ದಾಖಲೆ ಜಪ್ತಿ ಮಾಡಲಾಗಿದೆ ಗೃಹ ಸಚಿವರು ಹೇಳಿದ್ದಾರೆ.

    ಅವರನ್ನು ಪತ್ತೆ ಗಡಿವರೆಗೂ ಕರೆದೊಯ್ದು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದರು.

    ಭಾರತಕ್ಕೆ ಅಕ್ರಮವಾಗಿ ಬಾಂಗ್ಲಾ ವಲಸಿಗರ ಆಗಮನದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ರೀತಿ ಕ್ರಮಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ. (ಏಜನ್ಸೀಸ್​)

    ಅಂತ್ಯಕ್ರಿಯೆ ನಡೆದ ಐದೇ ದಿನದಲ್ಲಿ ಜೀವಂತವಾಗಿ ಮನೆಗೆ ಮರಳಿದ ಸತ್ತ ವ್ಯಕ್ತಿ! ಪೊಲೀಸರ ನಿದ್ದೆಗೆಡಿಸಿದ ಪ್ರಕರಣವಿದು…

    14 ವರ್ಷಗಳಿಂದ ರಾತ್ರಿ ಹೊತ್ತು ಊಟ ಮಾಡ್ತಿಲ್ಲ ಮನೋಜ್ ಬಾಜಪೇಯಿ! ಅಸಲಿ ಸಂಗತಿ ಬಿಚ್ಚಿಟ್ಟ ನಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts