ಯತ್ನಾಳ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಮೂವರು ಶಾಸಕರು!

Basangouda Patil Yatnal
Basangouda Patil Yatnal
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೆ ಅಪಸ್ವರ ಎತ್ತುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಅರುಣ್ ಕುಮಾರ್ ಜಂಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಯತ್ನಾಳ್ ಅನಗತ್ಯ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಿ.ವೈ.ವಿಜಯೇಂದ್ರ ವಿರುದ್ಧ ಆರೋಪವೂ ಸರಿಯಲ್ಲ. ಭ್ರಷ್ಟಾಚಾರದ ದಾಖಲೆಗಳಿದ್ದರೆ ಬಿಡುಗಡೆ ಮಾಡಲೆಂದು ಸವಾಲೆಸೆದರು. ಪದೇಪದೆ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡುತ್ತಿರುವ ಯತ್ನಾಳ್ ಶಿಸ್ತುಕ್ರಮ ಕೈಗೊಳ್ಳಲು ಪಕ್ಷದ ವರಿಷ್ಠರಿಗೆ ಒತ್ತಾಯಿಸುತ್ತೇವೆ‌ ಎಂದು ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅರುಣ್ ಕುಮಾರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net