ಫ್ರಿಜ್​ ಕಂಪ್ರೆಸರ್ ಸ್ಫೋಟ; ಒಂದೇ ಕುಟುಂಬದ ಐವರು ಸಾವು

ಪಂಜಾಬ್​​:  ಮನೆಯೊಂದರಲ್ಲಿ ಫ್ರಿಡ್ಜ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಪಂಜಾಬ್‌ನ ಜಲಂಧರ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಮೃತರು. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. … Continue reading ಫ್ರಿಜ್​ ಕಂಪ್ರೆಸರ್ ಸ್ಫೋಟ; ಒಂದೇ ಕುಟುಂಬದ ಐವರು ಸಾವು