

ಮುಂಬೈ: ವಾಣಿಜ್ಯನಗರಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಗ್ಯಾಲಕ್ಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮೂರು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಧ್ಯಾಹ್ನ 1 ಘಂಟೆ ಸುಮಾರಿಗೆ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತ್ತೋಟಿಗೆ ತಂದಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ನಾಲ್ಕು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದ್ದು, ಕಟ್ಟಡದಲ್ಲಿ ಸಿಲುಕಿರುವ ಮತ್ತಷ್ಟು ಜನರು ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.