ಕಾಶ್ಮೀರದಲ್ಲಿ ಉಗ್ರ ದಾಳಿಗೆ ಮೂವರು ಯೋಧರು ಹುತಾತ್ಮ

kashmir-attack
Published on

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರ ನಸುಕಿನ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಒಬ್ಬ ಪೊಲೀಸ್ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪಡೆ ಪೊಲೀಸರು ಹುತಾತ್ಮರಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಜಮ್ಮು-ಕಾಶ್ಮೀರ ಪೊಲೀಸ್​​ ವಿಶೇಷ ಪೊಲೀಸ್ ಅಧಿಕಾರಿ(ಎಸ್​ಪಿಒ) ಮತ್ತು ಇಬ್ಬರು ಸಿಆರ್​ಪಿಎಫ್ ಯೋಧರು ಉಗ್ರರ ಗುಂಡಿನ ದಾಳಿಗೆ ಎದೆಯೊಡ್ಡಬೇಕಾಗಿ ಬಂದು ಹುತಾತ್ಮರಾದರು. ಈ ಘಟನೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದಿತ್ತು.

ದಾಳಿ ನಡೆಸಿದ ಕೂಡಲೇ ಉಗ್ರರು ಆ ಸ್ಥಳದಿಂದ ಪರಾರಿಯಾಗಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿದ್ದ ರಕ್ಷಣಾ ಪಡೆಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಇದರ ಬೆನ್ನಿಗೆ, ರಕ್ಷಣಾ ಪಡೆಗಳು ಆ ಪ್ರದೇಶ ಪೂರ್ತಿ ಆವರಿಸಿಕೊಂಡು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net