ಯೋಧರ ಬಸ್​​, ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು, 25 ಪ್ರಯಾಣಿಕರಿಗೆ ಗಾಯ

ಸಿಯೋನಿ: ವಿಶೇಷ ಸಶಸ್ತ್ರ ಪಡೆ (ಎಸ್‌ಎಎಫ್) ಯೋಧರು ತೆರಳುತ್ತಿದ್ದ ಬಸ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ. ಸಿಯೋನಿ-ಮಂಡ್ಲಾ ರಾಜ್ಯ ಹೆದ್ದಾರಿಯಲ್ಲಿರುವ ಧನಗಡ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ:ಆಸ್ತಿ ಘೋಷಣೆ ಮಾಡಿದ ಡಾ.ಮಂಜುನಾಥ್‌: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು? ಕಾರಿನಲ್ಲಿದ್ದ ಐದು ಜನರ ಪೈಕಿ ಮೂವರು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮಹಾರಾಷ್ಟ್ರದ ನಾಗ್ಪುರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continue reading ಯೋಧರ ಬಸ್​​, ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು, 25 ಪ್ರಯಾಣಿಕರಿಗೆ ಗಾಯ