More

    ತೃಣಮೂಲ ಕಾಂಗ್ರೆಸ್​ ನಾಯಕನ ಮನೆಯಲ್ಲಿ ಬಾಂಬ್​ ಸ್ಫೋಟ: ಮೂವರು ದುರಂತ ಸಾವು

    ಕೋಲ್ಕತ: ಪಶ್ಚಿಮ ಬಂಗಾಳದ ಪೂರ್ವ ಮೆದಿನಿಪುರ್​ನಲ್ಲಿರುವ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ನಾಯಕರೊಬ್ಬರ ಮನೆ ಮೇಲೆ ಬಾಂಬ್​ ದಾಳಿ ನಡೆದಿದ್ದು, ಮೂವರು ಸಾವಿಗೀಡಾಗಿದ್ದಾರೆ.

    ಇಂದು ಜಿಲ್ಲೆಯಲ್ಲಿ ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ನಿಗದಿತ ರ್ಯಾಲಿಯ ಸ್ಥಳವಾದ ಪೂರ್ವ ಮಿಡ್ನಾಪುರದ ಕೊಂಟೈನಿಂದ ಸುಮಾರು 40 ಕಿಮೀ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ. ಭೂಪತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾಗಬನ್‌ಪುರ ಬ್ಲಾಕ್ 2ರ ನಾರ್ಯಬಿಲಾ ಗ್ರಾಮದಲ್ಲಿ ಬಾಂಬ್​ ಸ್ಫೋಟಿಸಿದೆ.

    ನಾರ್ಯಬಿಲಾ ಗ್ರಾಮದ ತೃಣಮೂಲ ಕಾಂಗ್ರೆಸ್​ ಬೂತ್​ ಅಧ್ಯಕ್ಷರ ಮನೆಯಲ್ಲಿ ಶುಕ್ರವಾರ ರಾತ್ರಿ 11.15 ಸುಮಾರಿಗೆ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯು ಸಹ ನೆಲಸಮವಾಗಿದೆ. ಬಾಂಬ್​ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಸದ್ಯ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

    ತೃಣಮೂಲ ನಾಯಕನ ಮನೆಯಲ್ಲಿ ದೇಶಿ ನಿರ್ಮಿತ ಬಾಂಬ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್, ರಾಜ್ಯದಲ್ಲಿ ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿ ಹೊಂದುತ್ತಿದೆ ಎಂದು ಆರೋಪ ಮಾಡಿದ್ದಾರೆ.

    ಇಂತಹ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಮೌನವಾಗಿದ್ದಾರೆ ಎಂದು ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಪ್ರಶ್ನಿಸಿದ್ದಾರೆ ಮತ್ತು ಅವರಿಂದ ಪ್ರತಿಕ್ರಿಯೆಗೆ ಒತ್ತಾಯಿಸಿದ್ದಾರೆ. ಆದರೆ, ಯಾವುದೇ ಸಾಕ್ಷ್ಯಾಧಾರ ಇಲ್ಲದೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್​ ಘೋಷ್​ ತಿರುಗೇಟು ನೀಡಿದ್ದಾರೆ. (ಏಜೆನ್ಸೀಸ್​)

    ಕಿಲಾಡಿ ಲೇಡಿಯ ರಹಸ್ಯ ಆಧಾರ್​ ಕಾರ್ಡ್​ನಿಂದ ಬಯಲು​: ಅನಾಥೆ ಅಂತಾ ಅನುಕಂಪ ತೋರಿಸಿದ್ರೆ ಹೀಗ್​ ಮಾಡೋದಾ?

    ಮುಂದುವರಿದ ಚಿರತೆ ಶೋಧ ಕಾರ್ಯ; ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    ಪತಿಯ ಸ್ನೇಹಿತನ ಜತೆ 2ನೇ ಮದುವೆಗೆ ತಯಾರಿ! ನಟಿ ಮೀನಾ ಕೊಟ್ಟ ಸ್ಪಷ್ಟನೆ ಇಲ್ಲಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts