ಉಡುಪಿಯ ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

Law & Order Court
Published on

ಉಡುಪಿ: ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿರುವ ಪ್ರಕರಣ ನಡೆದಿದ್ದು ಅನೇಕ ವಿವಾದಗಳಿಗೆ ಕಾರಣವಾಗುತ್ತಿದೆ.

ಈ ಪ್ರಕರಣದ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದರು. ಅವರು ನೀಡಿದ್ದ ಹೇಳಿಕೆಯೂ ವಿವಾದಕ್ಕೆ ಕಾರಣವಾಗಿತ್ತು. ಅವರ ಹೇಳಿಕೆ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಸದಸ್ಯನೊಬ್ಬ ನೀಡಿದ್ದ ಹೇಳಿಕೆಯೂ ಭಾರಿ ಸದ್ದು ಮಾಡುತ್ತಿದೆ.

ಈ ಹಿಂದೆ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಗಳಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಇಂದು ಈ ಮೂವರು ವಿದ್ಯಾರ್ಥಿನಿಯರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇಂದು ಬೆಳಗ್ಗೆ ವಕೀಲರ ಮೂಲಕ ಉಡುಪಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಆರೋಪಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದರು. ಇದೀಗ ಉಡುಪಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net