ರೇಪ್​ ಮಾಡೋಕೆ ಪ್ರಯತ್ನ ಪಟ್ಟವರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

andhra
Published on

ಅಮರಾವತಿ: ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿಗಳನ್ನು ಗ್ರಾಮಸ್ಥರೇ ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

ಗೋದಾವರಿ ಜಿಲ್ಲೆಯ ರಾಯವರಂ ಮಂಡಲದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಮಹಿಳೆಯೊಬ್ಬಳು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ನಾಲ್ವರು ಬೈಕ್​ನಲ್ಲಿ ಬಂದು ಮಹಿಳೆಯನ್ನು ಅಡ್ಡಗಟ್ಟಿದ್ದಾರೆ. ನಂತರ ಆಕೆಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಊರಿಗೆ ಓಡಿಬಂದಿದ್ದಾಳೆ.

ವಿಷಯ ತಿಳಿದ ಗ್ರಾಮಸ್ಥರು ಕಾಮುಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಹಿಡಿದಿದ್ದಾರೆ. ಓರ್ವ ಆರೋಪಿ ಎಸ್ಕೇಪ್​ ಆಗಿದ್ದಾನೆ. ಸಿಕ್ಕಿಬಿದ್ದ ಮೂವರನ್ನು ಮರವೊಂದಕ್ಕೆ ಕಟ್ಟಿ ಥಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net