More

    ಕಾಡಂಚಿನ ಗ್ರಾಮಗಳಿಗೆ ಹಗಲು 3 ಫೇಸ್ ವಿದ್ಯುತ್: ಸಚಿವರದ್ದೇ ಮನವಿ

    ಬೆಂಗಳೂರು: ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಿನಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆಗೆ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
    ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ. ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ರಾತ್ರಿಯ ವೇಳೆ ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು 3ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.
    ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಒದಗಿಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts