More

    VIDEO| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್​ ಆದ ಖದೀಮರು; 8 ಮಂದಿ ಅಮಾನತು

    ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಕಸ್ಟಡಿಯಲ್ಲಿದ್ದ ಮೂವರು ಕಳ್ಳರು ಜನನಿಬಿಡ ಪ್ರದೇಶದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರ 8 ಮಂದಿ ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿದೆ.

    ಪರಾರಿಯಾಗಿರುವವರನ್ನು ಬ್ರಿಜೇಂದ್ರ (27), ಜ್ಞಾನಪ್ರಸಾದ್​ (23), ಶೈಲೇಂದ್ರ (20) ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪೊಲೀಸರ ಕಾರ್ಯವೈಖರಿ ಸಾಕಷ್ಟು ಖಂಡನೆಗೆ ಗುರಿಯಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಏಳು ಮಂದಿಯನ್ನು ರೈಲ್ವೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸ್​ ಅಧಿಕಾರಿಗಳು ಟೀ ಕುಡಿಯಲೆಂದು ನ್ಯಾಯಾಲಯಕ್ಕೆ ಕೂಗಳತೆ ದೂರದಲ್ಲಿ ವಾಹನವನ್ನು ನಿಲ್ಲಿಸಿದ್ದಾರೆ.

    ಇದನ್ನೂ ಓದಿ: ಡೊನಾಲ್ಡ್ ಟ್ರಂಪ್​ ಮಗನ ಎಕ್ಸ್​ ಖಾತೆ ಹ್ಯಾಕ್​ ಮಾಡಿ ಅಪ್ಪ ನಿಧನರಾಗಿದ್ದಾರೆಂದು ಪೋಸ್ಟ್​!

    ಇದನ್ನೇ ಅವಕಾಶ ಮಾಡಿಕೊಂಡ ಮೂವರು ಆರೋಪಿಗಳು ವ್ಯಾನಿನ ಬಾಗಿಲು ತೆರೆದಿರುವುದನ್ನು ನೋಡಿ ಪರಾರಿಯಾಗಿದ್ದಾರೆ. ವ್ಯಾನಿನಲ್ಲಿದ್ದ ನಾಲ್ವರು ಈ ಬಗ್ಗೆ ಪೊಲೀಸರಿಗೆ ತಕ್ಷಣವೇ ತಿಳಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ತಲೆಮಾರಿಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು, ಅವರ ಬಂಧನಕ್ಕಾಗಿ ಮೂರು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು.

    ಪ್ರಕರಣ ಸಂಬಂಧ ಮೂವರು ಸಬ್​ಇನ್ಸ್​ಪೆಕ್ಟರ್​ ಸೇರಿದಂತೆ ಎಂಟು ಮಂದಿ ಪೊಲೀಸರನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts