ಪ್ರವಾಸಕ್ಕೆ ತೆರಳುತ್ತಿದ್ದಾಗ Road Accident; ಮೂವರು ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ

Car Accident
Published on

ಮಂಡ್ಯ: ಪ್ರವಾಸಕ್ಕೆಂದು ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬೋಸೇಗೌಡನದೊಡ್ಡಿ ಬಳಿ ನಡೆದಿದೆ.

ಮೃತರನ್ನು ಪ್ರಣವ್, ಆಕಾಶ್, ಆದರ್ಶ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಪೃಥ್ವಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಈ ಘಟನೆ ನಡೆದಿದ್ದು, ಮಳವಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್​ಆರ್​ಟಿಸಿ ಬಸ್​ ಓವರ್​​​ಟೇಕ್ ಮಾಡುತ್ತಿದ್ದಾಗ ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿದ್ದಾರೆ. ಲಾರಿಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net