More

    ಮಲಗಿದ್ದಲ್ಲೆ ಪ್ರಾಣ ಬಿಟ್ಟ ಮೂವರು ವಿದ್ಯಾರ್ಥಿಗಳು, ಮತ್ತೊಬ್ಬನ ಸ್ಥಿತಿ ಚಿಂತಾಜನಕ

    ಕಿಯೋಂಜಾರ್: ಹಾಸ್ಟೆಲ್​ನಲ್ಲಿ ಮಲಗಿದ್ದ ವೇಳೆ ವಿಷಕಾರಿ ಹಾವು ಕಚ್ಚಿ ಇಬ್ಬರು ಹುಡುಗಿಯರು ಸೇರಿದಂತೆ ಕನಿಷ್ಠ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಕಿಯೋಂಜಾರ್​ ಜಿಲ್ಲೆಯಲ್ಲಿ ನಡೆದಿದೆ.

    ಇದನ್ನೂ ಓದಿ: ಭಾರತದ ಮಾರುಕಟ್ಟೆಗೆ ಮತ್ತೆ ಕಾಲಿಡಲಿದೆ ಕೋಬ್ರಾ ಬಿಯರ್​​..?

    ಮೃತ ವಿದ್ಯಾರ್ಥಿಗಳನ್ನು ರಾಜಾ ನಾಯಕ್ (12), ಶೆಹಶ್ರೀ ನಾಯಕ್ (11) ಮತ್ತು ಎಲಿನಾ ನಾಯಕ್ (12) ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕಾಶ್ ನಾಯಕ್ (12) ಎಂಬಾತನ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಶನಿವಾರ ರಾತ್ರಿ ಕಿಯೋಂಜಾರ್ ಜಿಲ್ಲೆಯ ಬರಿಯಾ ಪ್ರದೇಶದ ನಿಶ್ಚಿಂತಾಪುರ ಗ್ರಾಮದ ಕೋಚಿಂಗ್ ಸೆಂಟರ್ ಹಾಸ್ಟೆಲ್‌ನಲ್ಲಿ ನಾಲ್ವರು ವಿದ್ಯಾರ್ಥಿಗಳು ನೆಲದ ಮೇಲೆ ಮಲಗಿದ್ದಾಗ ಈ ಘಟನೆ ನಡೆದಿದೆ.

    ಎಲ್ಲಾ ನಾಲ್ವರು ವಿದ್ಯಾರ್ಥಿಗಳನ್ನು ಕಿಯೋಂಜಾರ್‌ನಲ್ಲಿರುವ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೂವರು ವಿದ್ಯಾರ್ಥಿಗಳು ಸತ್ತಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯನ್ನು ಉತ್ತಮ ಚಿಕಿತ್ಸೆಗಾಗಿ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಡಿಶಾದಲ್ಲಿ ಹಾವು ಕಡಿತದ ಪ್ರಕರಣಗಳು ತುಂಬಾ ಸಾಮಾನ್ಯವಾಗಿದ್ದು, ಇದು ಭಾರತದ ಅತಿ ಹೆಚ್ಚು ಹಾವು-ಕಚ್ಚುವಿಕೆಗೆ ಒಳಗಾಗುವ ರಾಜ್ಯವಾಗಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts