More

    3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

    ಬೆಂಗಳೂರು ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ 105ನೇ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಮಾತನಾಡಿದರು.

    ರಾಜ್ಯದಲ್ಲಿ 2019ರಲ್ಲಿ ಆರಂಭವಾಗಿ ಪ್ರಸ್ತುತ 285 ಶಾಲೆಗಳು ಕಾರ್ಯನಿರ್ವಹಿತ್ತಿವೆ. ಪ್ರತಿ ಶಾಲೆಗೆ 30 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಪ್ರವೇಶ ಕೋರಿ ಕನಿಷ್ಠ 120ರಿಂದ 150 ಅರ್ಜಿಗಳು ಬರುತ್ತಿವೆ
    ಎಂದು ಹೇಳಿದರು.

    ರಾಜ್ಯದ ಎಲ್ಲ ಕಡೆಯಿಂದಲೂ ಬೇಡಿಕೆ ಬರುತ್ತಿರುವುದರಿಂದ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 285 ಅನ್ನು ಮುಂದಿನ ವರ್ಷ 500ರಿಂದ 600ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 3 ವರ್ಷದಲ್ಲಿ ಇದನ್ನು 3 ಸಾವಿರಕ್ಕೆ ಹೆಚ್ಚಿಸಿ ಸಿಎಸ್‌ಆರ್ ಅನುದಾನದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

    ಅಂಗನವಾಡಿಯಲ್ಲಿ ಕಲಿಕೆಯಲ್ಲಿ ಮಕ್ಕಳು ಹಿಂದುಳಿಯುತ್ತಿರುವುದು 1ನೇ ತರಗತಿ ದಾಖಲಾತಿ ವೇಳೆ ತಿಳಿದುಬರುತ್ತಿದೆ. ಹೀಗಾಗಿ, ಕೆಪಿಎಸ್‌ನಲ್ಲಿಯೇ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿ ವರೆಗೂ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಪಾಠದ ಜತೆಗೆ ಸಂಗೀತ, ಕ್ರೀಡೆ, ಕಲೆ ಮತ್ತು ಜ್ಞಾನ, ದೈಹಿಕ ಶಿಕ್ಷಣ ಸೇರಿ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts