ನಳಂದ: ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಬಾಲಕನನ್ನು ರಕ್ಷಣಾ ಸಿಬ್ಬಂದಿ ರಕ್ಷಿಸುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: VIDEO| 100 ಅಡಿ ಆಳದ ತೆರೆದ ಬೋರ್‌ವೆಲ್‌ಗೆ ಬಿದ್ದ 3 ವರ್ಷದ ಮಗು, ಪೈಪ್ ಮೂಲಕ ಆಮ್ಲಜನಕ ಪೂರೈಕೆ
ಇಂದು ಬೆಳಿಗ್ಗೆ ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಕೆಲಸಕ್ಕೆಂದು ಹೋಗಿದ್ದ ವೇಳೆ ತನ್ನ ಮಗನನ್ನು ಕರೆದೊಯ್ದಿದ್ದಳು. ಈ ವೇಳೆ ಶಿವಂ ಎಂಬ ಮಗು ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿತ್ತು. ಸುದ್ದಿಯನ್ನು ತಿಳಿದು ಸ್ಥಳಕ್ಕಾಗಮಿಸಿದ ಎನ್‌ಡಿಆರ್‌ಎಫ್ ತಂಡವು, ಸುಮಾರು 40-50 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದನ್ನು ಪತ್ತೆ ಹಚ್ಚಿ ಮಗುವಿಗೆ ಪೈಪ್ ಮೂಲಕ ಆಮ್ಲಜನಕ ಪೂರೈಕೆ ಮಾಡಿತ್ತು.
#WATCH | Bihar: The child who fell into a borewell in Kul village in Nalanda has been rescued. More details are awaited. https://t.co/G6FW8RDIJJ pic.twitter.com/KQouMHkffD
— ANI (@ANI) July 23, 2023
ಸತತ 5 ಗಂಟೆಗಳ ಕಾಲ ಜೆಸಿಬಿ ಮೂಲಕ ಕಾರ್ಯಾಚರಣೆಯನ್ನು ನಡೆಸಿದ ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದ್ದು, ಮಗುವಿನ ಆರೋಗ್ಯದ ದೃಷ್ಟಿಯಿಂದ ಮಗುವನ್ನು ಹೊರತೆಗೆದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಮೂಲಕ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೈತನೊಬ್ಬ ಬೋರ್‌ವೆಲ್ ಅಗೆದು ಅದನ್ನು ಮುಚ್ಚದೆ ಬಿಟ್ಟಿದ್ದರಿಂದ ಘಟನೆ ಸಂಭವಿಸಿತ್ತು.(ಏಜೆನ್ಸೀಸ್)