More

    30ಕ್ಕೂ ಅಧಿಕ ಮಂದಿಗೆ ದಿಢೀರನೇ ವಾಂತಿಭೇದಿ; ವಿಷಾಹಾರ ಸೇವನೆ ಶಂಕೆ

    ಸಾಗರ: ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ವಾಂತಿಭೇದಿಯಿಂದ 30ಕ್ಕೂ ಹೆಚ್ಚು ಮಕ್ಕಳು, ಮಹಿಳೆಯರು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ದಿಢೀರನೇ ವಾಂತಿಭೇದಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಾತನಾಡಿರುವ ಡಾ. ಕಾಂತೇಶ್ ಜೆ.ಕುಮಾರ್, ಬೆಳಗ್ಗೆಯಿಂದ 25ಕ್ಕೂ ಹೆಚ್ಚು ಮಕ್ಕಳು ವಾಂತಿಭೇದಿ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಸ್ವರೂಪ ಕಾಣಿಸಿಕೊಂಡಿಲ್ಲ. ಭಾನುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ್ದರಿಂದ ಫುಡ್ ಪಾಯಿಸನ್ ಆಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದಿದ್ದಾರೆ.
    ತಾಲೂಕು ವೈದ್ಯಾಧಿಕಾರಿ ಡಾ. ಕೆ.ಎಸ್.ಮೋಹನ್ ‘ವಿಜಯವಾಣಿ’ ಜತೆ ಮಾತನಾಡಿ, ಸಾರ್ವಜನಿಕರು ಹೆದರುವ ಅಗತ್ಯವಿಲ್ಲ, ವಾತಾವರಣದ ಬದಲಾವಣೆ, ಆಹಾರದಲ್ಲಿ ಏನಾದರೂ ಸಮಸ್ಯೆಯಾಗಿದ್ದರೆ ಈ ರೀತಿ ಆಗುತ್ತದೆ. ಆನಂದಪುರದ ವೈದ್ಯರು ಮತ್ತು ಸಿಬ್ಬಂದಿ ಎಲ್ಲ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಲಾಗಿದ್ದು ಶುದ್ಧವಾದ ನೀರು ಪೂರೈಕೆ ಮಾಡಲು ತಿಳಿಸಲಾಗಿದೆ. ಅಲ್ಲದೇ ಸಾರ್ವಜನಿಕರು ಮನೆಯಲ್ಲಿ ಕುದಿಸಿ ಆರಿಸಿದ ನೀರು ಉಪಯೋಗಿಸುವ ಜತೆಗೆ ಸ್ವಚ್ಛತೆ ಕಾಯ್ದುಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts