More

    30ರಿಂದ ಶ್ರೀಶೈಲದಲ್ಲಿ ಯುಗಾದಿ ಮಹೋತ್ಸವ

    ಕಲಬುರಗಿ: ಶ್ರೀಶೈಲದಲ್ಲಿನ ಸಾರಂಗ ಮಠದಲ್ಲಿ 30 ರಿಂದ ಏ.2ವರೆಗೆ ಯುಗಾದಿ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿಯ ಸುಲಫಲ ಮಠ ಮತ್ತು ಶ್ರೀಶೈಲ ಸಾರಂಗ ಮಠದ ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

    30ರಂದು ನಿಡುಮಾಮಿಡಿಯ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಾನ್ನಿಧ್ಯ, ಚಿಂಚನಸೂರ ಕಲ್ಮಠದ ಶ್ರೀ ಸಿದ್ಧಮಲ್ಲ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್ ಉದ್ಘಾಟಿಸುವರು. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ರಾಜ್ಯ ಸಕರ್ಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ್ ಕೊಡಲಹಂಗರಗಾ, ಮುಖಂಡರಾದ ನೀಲಕಂಠರಾವ ಮೂಲಗೆ, ಶರಣು ಪಪ್ಪಾ, ಮಲ್ಲಿಕಾಜರ್ುನ ಖೇಮಜಿ, ಗೌಸ ಬಾಬಾ, ಎಂ.ಎಸ್.ಪಾಟೀಲ್ ನರಿಬೋಳ, ದಿವ್ಯಾ ಹಾಗರಗಿ ಮೊದಲಾದವರು ಭಾಗವಹಿಸುವರು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    31ರಂದು ಸೊನ್ನದ ಶ್ರೀ ಡಾ.ಶಿವಾನಂದ ಸ್ವಾಮೀಜಿ, ಚವದಾಪುರಿ ಹಿರೇಮಠದ ಶ್ರೀ ಡಾ.ರಾಜಶೇಖರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾರಂಭವನ್ನು ಉದ್ಯಮಿ ಸಂತೋಷ ಬಿಲಗುಂದಿ ಉದ್ಘಾಟಿಸಿದರು. ಮಾಜಿ ಮೇಯರ್ ಶರಣು ಮೋದಿ ಇತರರು ಪಾಲ್ಗೊಳ್ಳುವರು. ಏ.1ರಂದು ಸಂಜೆ 5ಕ್ಕೆ ದಾಸೋಹ ಭವನಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಅಡಿಗಲ್ಲು ನೆರವೇರಿಸುವರು. ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗರ್, ಬಿ.ಜಿ.ಪಾಟೀಲ್, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ ಇತರರು ಭಾಗವಹಿಸಲಿದ್ದಾರೆ. 2ರಂದು ಬೆಳಗ್ಗೆ 10ಕ್ಕೆ ಶ್ರೀ ಜಗದ್ಗುರು ರಾಜದೇಶಿಕೇಂದ್ರ ಸ್ವಾಮಿಗಳ ಕತುೃ ಗದ್ದುಗೆಗೆ ರುದ್ರಾಭಿಷೇಕ, ಶಿವ ಅಷ್ಟೋತ್ತರ ನಾಮಾವಳಿ, ಮಹಾಮಂಗಳಾರತಿ ಸೇರಿ ಹಲವು ಕಾರ್ಯಕ್ರಮ ನಡೆಯಲಿವೆ ಎಂದರು.

    ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ, ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಮುಖಂಡರಾದ ನಾಗಲಿಂಗಯ್ಯ ಮಠಪತಿ, ಅಂಬಾರಾಯ ಬೆಳಕೋಟ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts