Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

30 ಜಾನುವಾರುಗಳ ರಕ್ಷಣೆ

Thursday, 14.06.2018, 5:02 AM       No Comments

ಹುಣಸೂರು: ಜಾನುವಾರು ಅಕ್ರಮ ಸಾಗಣೆ ಮೂರು ಪ್ರತ್ಯೇಕ ಪ್ರಕರಣವನ್ನು ಪತ್ತೆ ಹಚ್ಚಿರುವ ಹುಣಸೂರು ಗ್ರಾಮಾಂತರ ಪೊಲೀಸರು 30 ಜಾನುವಾರು, ಮೂರು ವಾಹನ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಕಟ್ಟೆಮಳಲವಾಡಿಯ ಅನ್ಸರ್, ಪಿರಿಯಾಪಟ್ಟಣ ತಾಲೂಕು ಹಲಗನಹಳ್ಳಿಯ ಸೈಯದ್ ಸರ್ಫೆಜ್ ಬಂಧಿತರು. ಎರಡು ವಾಹನಗಳ ಚಾಲಕರು ಪರಾರಿಯಾಗಿದ್ದಾರೆ. 30 ಜಾನುವಾರುಗಳನ್ನು ಮೈಸೂರಿನ ಪಿಂಜಿರಾಪೋಲ್​ಗೆ ಕಳುಹಿಸಲಾಗಿದೆ.

ಕಟ್ಟೆಮಳಲವಾಡಿಗೆ ಚುಂಚನಕಟ್ಟೆ ಕಡೆಯಿಂದ ಜಾನುವಾರುಗಳನ್ನು ವಾಹನದಲ್ಲಿ ತುಂಬಿಕೊಂಡು ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಟ್ಟೆಮಳಲವಾಡಿ ಬಳಿ ವಾಹನವನ್ನು ವಶಕ್ಕೆ ಪಡೆದು ಅದರಲ್ಲಿದ್ದ ಎಮ್ಮೆ ಕರು ಸೇರಿದಂತೆ 7 ಜಾನುವಾರುಗಳನ್ನು ಬಂಧಮುಕ್ತಗೊಳಿಸಿ ಚಾಲಕ ಸೈಯದ್ ಸರ್ಫೆಜ್ ಮತ್ತು ಅನ್ಸರ್​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲೂಕಿನ ರತ್ನಪುರಿಯಲ್ಲಿ ಸಾಗಣೆ ಮಾಡುತ್ತಿದ್ದ ವಾಹನ ತಡೆದು ಪರಿಶೀಲಿಸಿ 4ಜಾನುವಾರುಗಳನ್ನು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ರತ್ನಪುರಿಗೆ ಸಮೀಪದ ಕುಡಿನೀರುಮುದ್ದನಹಳ್ಳಿ ಬಳಿ ವಾಹನದಲ್ಲಿ ಸಾಗಿಸುತ್ತಿದ್ದ 19 ರಾಸುಗಳನ್ನು ವಶಕ್ಕೆ ಪಡೆದರು. ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಕಾರ್ಯಾಚರಣೆಯಲ್ಲಿ ಎಸ್​ಐ ಆನಂದ್, ಸಿಬ್ಬಂದಿ ನಾಗರಾಜು, ಸಂತೋಷ್, ದಿನೇಶ್, ಮಂಜುನಾಥ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Back To Top