More

    ಸಂಸತ್​ ಅಧಿವೇಶನದಲ್ಲಿ 30 ಮಸೂದೆಗಳು; ಯಾವುದೇ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಮೋದಿ

    ನವದೆಹಲಿ : ನಾಳೆ ಆರಂಭವಾಗಲಿರುವ ಸಂಸತ್​ ಮುಂಗಾರು ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನಲ್ಲಿ ಸಕಾರಾತ್ಮಕ ಮತ್ತು ರಚನಾತ್ಮಕ ಚರ್ಚೆಗೆ ಒತ್ತು ನೀಡಿದರು. ನಿಯಮಗಳ ಅಡಿಯಲ್ಲಿ ಬರುವ ಯಾವುದೇ ವಿಷಯದ ಬಗ್ಗೆ ಚರ್ಚೆಗೆ ತಮ್ಮ ಸರ್ಕಾರ ಸಿದ್ಧವಾಗಿದೆ ಎಂದರು.

    ಜುಲೈ 19 ರಿಂದ ಆಗಸ್ಟ್​ 13 ರವರೆಗೆ ನಡೆಯಲಿರುವ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು 30 ಮಸೂದೆಗಳನ್ನು ಪ್ರಸ್ತಾವನೆ ಮಾಡುವ ಯೋಜನೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದಲ್ಲಿ ಬೆಲೆ ಏರಿಕೆ, ಕರೊನಾ ಎರಡನೇ ಅಲೆಯನ್ನು ಸರ್ಕಾರ ನಿಭಾಯಿಸಿದ ರೀತಿ ಮತ್ತು ಕರೊನಾ ಲಸಿಕೆಗಳ ಪೂರೈಕೆ ಬಗ್ಗೆ ಪ್ರತಿಪಕ್ಷಗಳು ಚರ್ಚೆ ಎತ್ತಲಿವೆ ಎಂದು ಭಾವಿಸಲಾಗಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್​ ಮಾತುಕತೆ!

    ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಮತ್ತು ರಾಜ್ಯಸಭೆಯ ಸದನ ಮುಖಂಡ ಪಿಯೂಷ್ ಗೋಯಲ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು. 33 ಕ್ಕೂ ಹೆಚ್ಚು ಪಕ್ಷಗಳ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದರು. ಅಪ್ನಾ ದಳದ ಮುಖಂಡ ಮತ್ತು ಎನ್‌ಡಿಎ ಮಿತ್ರ ಅನುಪ್ರಿಯ ಪಟೇಲ್ ಮತ್ತು ಎಲ್‌ಜೆಪಿ ಮುಖಂಡ ಪಶುಪತಿ ಪರಾಸ್ ಕೂಡ ಸಭೆಯಲ್ಲಿ ಭಾಗವಹಿಸಿದರು.

    ಕಾಂಗ್ರೆಸ್​​ನಿಂದ ಪಕ್ಷದ ರಾಜ್ಯಸಭಾ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮತ್ತು ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಉಪಸ್ಥಿತರಿದ್ದರು. ಟಿಎಂಸಿಯ ಡೆರೆಕ್ ಒ’ಬ್ರಿಯೆನ್, ಡಿಎಂಕೆಯ ತಿರುಚಿ ಶಿವ, ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮತ್ತು ಬಿಎಸ್ಪಿಯ ಸತೀಶ್ ಮಿಶ್ರ ಸೇರಿದಂತೆ ಎಲ್ಲ ಪ್ರಮುಖ ವಿರೋಧ ಪಕ್ಷಗಳ ಸದನ ಮುಖಂಡರು ಉಪಸ್ಥಿತರಿದ್ದರು. (ಏಜೆನ್ಸೀಸ್)

    ರಾಜ್ಯದಲ್ಲಿ ಮಳೆ ಬಿರುಸು; ನಾಳೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಕಾರಿನಲ್ಲಿ ಹಣವಿಟ್ಟು ಚಾಲಕನಿಗೆ ಹೇಳಿ ಹೋದರು… ವಾಪಸ್​ ಬಂದಾಗ ಕಾದಿತ್ತು ಶಾಕ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts