More

    ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್​ ಪಲ್ಟಿ; ಓರ್ವ ಮೃತ್ಯು, 30 ಮಂದಿಗೆ ಗಂಭೀರ ಗಾಯ

    ಜೈಪುರ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್​ ಪಲ್ಟಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 30 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ನಡೆದಿದೆ.

    30 ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಶಾಲಾ ಬಸ್​ ಪೋಕ್ರಾನ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಜೈಸಲ್ಮೇರ್​ ಹಾಗೂ ಜೈಪುರದಲ್ಲಿ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಂಕ್ರಾ ಪೊಲೀಸ್​ ಠಾಣೆಯ ಅಧಿಕಾರಿ ಕೈಲಾಶ್​ ಚಂದ್​ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿಕ್ರಂ ಕುಮಾರ್​ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಅಕ್ರಮ IVF ಕೇಂದ್ರಗಳನ್ನು ಭೇದಿಸಲು ಅಭಿಯಾನ ಆರಂಭಿಸಿದ ಚೀನಾ

    ಅಪಘಾತದಲ್ಲಿ ಗಾಯಗೊಂಡಿರುವ 30ಕ್ಕೂ ಹೆಚ್ಚು ಮಕ್ಕಳು 10-15 ವರ್ಷ ವಯಸ್ಸಿನವರಾಗಿದ್ದು, ಎಲ್ಲರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರಿಗೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಸಂಕ್ರಾ ಪೊಲೀಸ್​ ಠಾಣೆಯ ಅಧಿಕಾರಿ ಕೈಲಾಶ್​ ಚಂದ್ ತಿಳಿಸಿದ್ದಾರೆ.

    ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಜೈಸಲ್ಮೇರ್​ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಭೇಟಿ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಸ್ಥಿತಿಗತಿಯ ಕುರಿತು ತಮಗೆ ಮಾಹಿತಿ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts