More

    ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!

    ನವದೆಹಲಿ: ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದವನ ವಿರುದ್ಧವಾಗಿ ಉತ್ತರ ಪ್ರದೇಶದ ಬದೌನ್ ಪೊಲೀಸರು 30 ಪುಟಗಳ ಚಾರ್ಜ್ ಶೀಟ್ ದಾಖಲಿಸಿದ್ದಾರೆ.

    ಆರೋಪಿ ಮನೋಜ್ ಕುಮಾರ್, ಕಳೆದ ವರ್ಷ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 429ರ ಅಡಿ ಪ್ರಕರಣ ದಾಖಲಾಗಿತ್ತು.ಈತ ಇಟ್ಟಿಗೆಯೊಂದಕ್ಕೆ ಇಲಿಯನ್ನು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಲ್ಲುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಸತ್ತ ಇಲಿಯನ್ನು ಇಟ್ಟಿಗೆಯಲ್ಲಿ ಕಟ್ಟಿದ್ದ ದಾರದ ಸಮೇತ ಆರೋಪಿ ವಿಡಿಯೋದಲ್ಲಿ ತೋರಿಸಿದ್ದನು.

    ಸ್ಥಳೀಯ ಪ್ರಾಣಿ ಹಕ್ಕು ಕಾರ್ಯಕರ್ತರು ನವೆಂಬರ್ 2022ರಲ್ಲಿ ದೂರು ದಾಖಲಿಸಿದ್ದರು. ಇಲಿಯ ಮೃತದೇಹವನ್ನು ಶವಪರೀಕ್ಷೆಗಾಗಿ ಬುಡಾನ್ನಲ್ಲಿರುವ ಪಶುವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು ಆದರೆ ಸಿಬ್ಬಂದಿ ಅದನ್ನು ಪರೀಕ್ಷಿಸಲು ನಿರಾಕರಿಸಿದರು. ನಂತರ ಮೃತದೇಹವನ್ನು ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಯಿತು. ನಂತರ ಫೋರೆನ್ಸಿಕ್ ಪರೀಕ್ಷೆಯಲ್ಲಿ ಇಲಿಯ ಶ್ವಾಸಕೋಶ ಊದಿಕೊಂಡಿದ್ದು ಶ್ವಾಸಕೋಶದ ಸೋಂಕಿನಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

    ಇದನ್ನೂ ಓದಿ:  ಹೃದಯಾಘಾತದ ಅಪಾಯ; ಈ 5 ಅಂಶಗಳು ನಿಮ್ಮ ಹೃದಯವನ್ನು ಹಾನಿಗೊಳಿಸಬಹುದು..

    2022ರ ನವೆಂಬರ್​​ನಲ್ಲಿ ಆರೋಪಿ ಈ ಕೃತ್ಯ ಎಸಗಿದ್ದ ಎಂದು ಚಾರ್ಜ್ ಶೀಟ್ನಲ್ಲಿ ನಮೂದಿಸಲಾಗಿದೆ. ಚಾರ್ಜ್ಶೀಟ್ ಬಲಗೊಳಿಸಲು ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧಾರವಾಗಿ ಬಳಸಿಕೊಳ್ಳಲಾಗಿದೆ. ಕಿಡಿಗೇಡಿತನದಿಂದ ಪ್ರಾಣಿಯನ್ನು ಕೊಂದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಇದಲ್ಲದೆ ಪ್ರಾಣಿಗಳ ವಿರುದ್ಧದ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್  ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಣ್ಣನ್ನು ಬಳಸಿ ತಯಾರಿಸಿದ ಪಾತ್ರೆಗಳನ್ನು ಇಲಿಗಳು ಹಾಳು ಮಾಡಿದ್ದವು. ಹೀಗಾಗಿ ಈ ಕೃತ್ಯವನ್ನು ಆರೋಪಿ ಮಾಡಿದ್ದಾನೆ.

    ನನ್ನ ಮಗನ ವಿರುದ್ಧ ಕ್ರಮ ಕೈಗೊಂಡರೆ ಆಡು,ಕೋಳಿ, ಕೋಳಿಗಳನ್ನು ಕಡಿಯುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಮೀನುಗಳು, ಇಲಿಗಳನ್ನು ಕೊಲ್ಲುವ ರಾಸಾಯನಿಕವನ್ನು ಮಾರಾಟ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಮನೋಜ್ ಕುಮಾರ್ ತಂದೆ ಮಥುರಾ ಪ್ರಸಾದ್ ಹೇಳಿದ್ದಾರೆ.

    ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಉಗ್ರರ ಯತ್ನ: ನಾಲ್ವರನ್ನು ಹೊಡೆದುರುಳಿಸಿದ ಸೇನೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts