More

    ಅನಿಮೇಷನ್, ಗೇಮಿಂಗ್ ಕ್ಷೇತ್ರದಲ್ಲಿ 30 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು ರಾಜ್ಯವು ಈಗಾಗಲೇ ಅನಿಮೇಷನ್, ಗೇಮಿಂಗ್ ಮತ್ತು ಕಾಮಿಕ್ಸ್ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿದ್ದು, 2028ರ ವೇಳೆಗೆ 30 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಯೋಜಿಸಿರುವ ಮೂರು ದಿನಗಳ ಜಿಎಎ್ಎಕ್ಸ್-2024 ಐದನೇ ಆವೃತ್ತಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಈ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜ್ವವು ಮುಂಚೂಣಿಯಲ್ಲಿದೆ. ಎವಿಜಿಸಿಎಕ್ಸ್‌ಆರ್‌ನಲ್ಲಿ ಜಾಗತಿಕ ನಾಯಕನಾಗಲು ಈಗಾಗಲೇ ಜಾರಿಯಲ್ಲಿರುವ ಶಕ್ತಿಯನ್ನು ಬಳಸಿಕೊಳ್ಳುವ ಗುರಿ ಹೊಂದಲಾಗಿದೆ. ಎವಿಜಿಸಿಎಕ್ಸ್‌ಆರ್‌ನ ಶ್ರೇಷ್ಠತೆಯ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದರು.

    2028ರ ವೇಳೆಗೆ ಈ ವಲಯದಲ್ಲಿ 30 ಸಾವಿರ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶ ಹೊಂದಿದ್ದು, ರಫ್ತು ಪ್ರಮಾಣವನ್ನು ಕನಿಷ್ಠ ಶೇ.80ಕ್ಕೆ ಹೆಚ್ಚಿಸಲು ಯೋಚಿಸಲಾಗುತ್ತಿದೆ. ಕಲಿಕೆ, ಪ್ರವೃತ್ತಿ, ಸವಾಲುಗಳ ಮೇಲೆ ಕೆಲಸ ಮಾಡಲು ಮತ್ತು ಭವಿಷ್ಯದ ಮಾರ್ಗಸೂಚಿಯನ್ನು ರಚಿಸಲು ಉದ್ಯಮ, ಶಿಕ್ಷಣ ಮತ್ತು ಸರ್ಕಾರದ ನಡುವೆ ಸಹಯೋಗ ತರುವ ವೇದಿಕೆ ರಚಿಸಲು ಉದ್ದೇಸಲಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರ್ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ. ಏಕ್‌ರೂಪ್ ಕೌರ್, ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿತುಲ್‌ಕುಮಾರ್, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ ಹಲವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts