ಸ್ನೇಹಿತನ ಪತ್ನಿಯನ್ನೇ ಹತ್ಯೆಗೈದ ಯುವಕ: ಎಣ್ಣೆ ಪಾರ್ಟಿಗೆಂದು ಮನೆಗೆ ಬಂದವನು ಮಾಡಿದ್ದು ಮಿತ್ರದ್ರೋಹ!

TN girl
Published on

ಚೆನ್ನೈ: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮರಿಮಲೈ ನಗರದಲ್ಲಿ ಮಂಗಳವಾರ ನಡೆದಿದೆ.

ಮೃತಳನ್ನು ಧರಣಿ (21) ಎಂದು ಗುರುತಿಸಲಾಗಿದೆ. ಈಕೆ ಮರಿಮಲೈ ನಗರದ ರಾಜೀವ್​ಗಾಂಧಿ ನಗರದ ನಿವಾಸಿ ಹಾಗೂ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್​ ಆಗಿರುವ ಸುಂದರ್​ ಎಂಬಾತನ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದರು.

ಸುಂದರ್​ ಸ್ನೇಹಿತ ಸುಡಾನ್​ (30) ಆಗಾಗ ಮನೆಗೆ ಭೇಟಿ ನೀಡುತ್ತಿದ್ದ. ಇಬ್ಬರು ಜನತೆಯಲ್ಲೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಸುಡಾನ್​ ಮತ್ತು ಧರಣಿ ನಡುವೆ ಸ್ನೇಹ ಬೆಳೆದಿತ್ತು. ಸ್ನೇಹ ಅಕ್ರಮ ಸಂಬಂಧಕ್ಕೆ ತಿರುಗಿತು. ಇಬ್ಬರು ಸುಂದರ್​ಗೆ ಗೊತ್ತಾಗದಂತೆ ರಹಸ್ಯ ಸಂಬಂಧವನ್ನು ಇಟ್ಟುಕೊಂಡಿದ್ದರು.

ಕೆಲವು ತಿಂಗಳುಗಳ ಹಿಂದೆ ಸುಂದರ್​ಗೆ ಈ ವಿಚಾರ ಗೊತ್ತಾಗಿ ಇಬ್ಬರಿಗೂ ಎಚ್ಚರಿಕೆ ನೀಡಿದ್ದ. ಇದಾದ ಬಳಿಕ ಧರಣಿ ಸುಡಾನ್​ ಜತೆ ಮಾತನಾಡುವುದನ್ನು ನಿಲ್ಲಿಸಿದಳು. ಇದರ ನಡುವೆ ಧರಣಿಗೆ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಇರುವುದು ಸುಡಾನ್​ಗೆ ತಿಳಿಯಿತು. ಬಳಿಕ ಸುಡಾನ್​, ಧರಣಿಯನ್ನು ಭೇಟಿಯಾಗಿ ಪ್ರಶ್ನೆ ಮಾಡಿದನು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿಯು ಸಹ ನಡೆಯಿತು.

ಆದರೆ, ಮರುದಿನ ಬೆಳಗ್ಗೆ ಅಂದರೆ ಮಂಗಳವಾರ ಸುಂದರ್​, ತನ್ನ ಕೆಲಸಕ್ಕೆ ತೆರಳಿದಾಗ, ಆತನ ಮನೆಗೆ ತೆರಳಿದ ಸುಡಾನ್​, ಎರಡು ವರ್ಷದ ಮಗಳ ಎದುರಲ್ಲೇ ಚಾಕುವಿನಿಂದ ಧರಣಿಯ ಮೇಲೆ ದಾಳಿ ಮಾಡಿದ್ದಾನೆ. ಆಕೆ ಮೃತಪಟ್ಟಿರುವುದು ಖಚಿತವಾದ ಬಳಿಕ ಚಾಕು ಸಮೇತ ಮರಿಮಲೈ ನಗರ ಪೊಲೀಸ್​ ಠಾಣೆಗೆ ತೆರಳಿ ಪೊಲೀಸರ ಮುಂದೆ ಸುಡಾನ್​ ಶರಣಾಗಿದ್ದಾನೆ.

ಇದಾದ ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಧರಣಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟು ಜನರಲ್​ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣವನ್ನು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net